ಹಾಸನಕ್ಕಿಂದು ಸಿಎಂ ಹೆಚ್‍ಡಿಕೆ

* ಸೆಸ್ಕ್ ಹಾಸನ ವಲಯ, ಮಾಪನ ಪರೀಕ್ಷಾ ವಿಭಾಗ ಉದ್ಘಾಟನೆ
* ರುದ್ರಪಟ್ಟಣದಲ್ಲಿ 66/11 ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ಚಾಲನೆ
ಹಾಸನ, ಜೂ.18- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜೂ.19ರ ಬುಧವಾರ ಹಾಸನಕ್ಕೆ ಆಗಮಿಸುತ್ತಿದ್ದು, ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಮೊದಲಿಗೆ ಚಾಮುಂಡೇಶ್ವರಿ ವಿದ್ಯುಚ್ಚಕ್ತಿ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಹಾಸನ ವಲಯವನ್ನು ನಗರದಲ್ಲಿ ಉದ್ಘಾಟಿಸಲಿರುವ ಮುಖ್ಯಮಂತ್ರಿಗಳು, ಅದೇ ವೇಳೆ ಸೆಸ್ಕ್‍ನ ಮಾಪಕ ಪರೀಕ್ಷಾ ವಿಭಾಗವನ್ನೂ ಲೋಕಾರ್ಪಣೆಗೊಳಿಸ ಲಿದ್ದಾರೆ. ಎರಡೂ ಕಾರ್ಯಕ್ರಮಗಳು ಬುಧವಾರ ಬೆಳಿÀಗ್ಗೆ 9.15ಕ್ಕೆ ನಗರದಲ್ಲಿರುವ ಕೆಪಿಟಿಸಿಎಲ್‍ನ ಪ್ರಸರಣಾ ಭವನದಲ್ಲಿ ನಡೆಯಲಿವೆ. ಶಾಸಕ ಪ್ರೀತಂ ಜೆ.ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಬಳಿಕ ಅರಕಲಗೂಡು ತಾಲೂಕಿನ ರುದ್ರಪಟ್ಟಣದಲ್ಲಿ ಬೆಳಿಗ್ಗೆ 10 ಗಂಟೆಗೆ 66/11 ಕೆವಿ ವಿದ್ಯುತ್ ಉಪ ಕೇಂದ್ರವನ್ನು ಉದ್ಘಾಟಿಸುವರು. ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಅಧ್ಯಕ್ಷತೆ ವಹಿಸುವರು.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ, ಉನ್ನತ ಶಿಕ್ಷಣ ಸಚಿವರೂ ಆದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವÀ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವರೂ ಆದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವÀ ಸಾ.ರಾ.ಮಹೇಶ್, ಸಂಸದ ಪ್ರಜ್ವಲ್ ರೇವಣ್ಣ ಉಪಸ್ಥಿತರಿರುವರು.

ಹಾಸನ ಜಿಪಂ ಅಧ್ಯಕ್ಷೆ ಬಿ.ಎಸ್.ಶ್ವೇತಾ, ಮೈಸೂರು ಜಿಪಂ ಅಧ್ಯಕ್ಷೆ ಪರಿಮಳ, ಕೊಡಗು ಜಿಪಂ ಅಧ್ಯಕ್ಷ ಹರೀಶ್, ಶಾಸಕರಾದ ಕೆ.ಟಿ.ಶ್ರೀಕಂಠೇಗೌಡ, ಮರಿತಿಬ್ಬೇಗೌಡ, ಹೆಚ್.ಕೆ.ಕುಮಾರಸ್ವಾಮಿ, ಶಿವಲಿಂಗೇಗೌಡ, ಸಿ.ಎನ್.ಬಾಲಕೃಷ್ಣ, ಎ.ಟಿ.ರಾಮಸ್ವಾಮಿ, ಕೆ.ಎಸ್.ಲಿಂಗೇಶ್, ಕನ್ನಡ ಮತ್ತು ಸಂಸ್ಕøತ ಇಲಾಖೆಯ ಸಂಸದೀಯ ಕಾರ್ಯದರ್ಶಿ ಎಂ.ಎ.ಗೋಪಾಲಸ್ವಾಮಿ, ಅರಕಲಗೂಡು ತಾಪಂ ಅಧ್ಯಕ್ಷೆ ವೀಣಾ, ರುದ್ರಪಟ್ಟಣ ಗ್ರಾಪಂ ಅಧ್ಯಕ್ಷೆ ಸೌಭಾಗ್ಯ, ಜಿಲ್ಲಾಧಿಕಾರಿ ಅಕ್ರಂ ಪಾಷಾ, ಎಸ್‍ಪಿ ಪ್ರಕಾಶ್‍ಗೌಡ, ಇಂಧನ ಇಲಾಖೆ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಕೆಪಿಟಿಸಿಎಲ್ ಎಂಡಿ ಎಸ್.ಸೆಲ್ವಕುಮಾರ್, ನಿರ್ದೇಶಕÀ ಕೆ.ವಿ.ಶಿವಕುಮಾರ್, ಸೆಸ್ಕ್ ಪ್ರಸರಣ ನಿರ್ದೇಶಕ ಅಫ್ತಾಭ್ ಅಹಮದ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಚಿನ್ನಸ್ವಾಮಿ ಮತ್ತಿತರರು ಭಾಗವಹಿಸುವರು.