ತೆರಿಗೆ ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಸೂಚನೆ
ಮೈಸೂರು

ತೆರಿಗೆ ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಸೂಚನೆ

May 8, 2020

ಬೆಂಗಳೂರು, ಮೇ 7(ಕೆಎಂಶಿ)-ರಾಜ್ಯದಲ್ಲಿ ಈಗ ಮತ್ತೆ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ತೆರಿಗೆ ಸೋರಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.
ನಕಲಿ ಇ-ವೇ ಬಿಲ್‍ಗಳ ಬಳಕೆ, ಸರಕು ಸಾಗಾಣಿಕೆಗೆ ನೀಡುವ ಸಮಯಾವಕಾಶದ ದುರ್ಬಳಕೆ ಮುಂತಾದ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯ ಮಂತ್ರಿಗಳು ಸೂಚಿಸಿದರು. ಕೋವಿಡ್-19ರ ಹಿನ್ನೆಲೆಯಲ್ಲಿ ಲಾಕ್‍ಡೌನ್ ಘೋಷಣೆಯಿಂದಾಗಿ ಸಹಜವಾಗಿ ತೆರಿಗೆ ಸಂಗ್ರಹ ಕುಂಠಿತವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿದೂಗಿಸಲು ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು. ಆರ್ಥಿಕ ಚಟುವಟಿಕೆಗಳು ಇದೀಗ ಮತ್ತೆ ಪ್ರಾರಂಭವಾಗು ತ್ತಿದ್ದು, ವ್ಯಾಪಾರಿಗಳಿಗೆ ಕಿರುಕುಳ ನೀಡದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸಲಹೆ ನೀಡಿದರು.

Translate »