ಸಿದ್ದಗಂಗಾ ಡಾ.ಶಿವಕುಮಾರಸ್ವಾಮೀಜಿ, ಆದಿಚುಂಚನಗಿರಿ ಬಾಲಗಂಗಾಧರನಾಥ ಶ್ರೀಗಳ ಹುಟ್ಟೂರಲ್ಲಿ ಸಾಂಸ್ಕೃತಿಕ, ಪಾರಂಪರಿಕ ಕೇಂದ್ರ ಕಾಮಗಾರಿ ಕೈಗೊಳ್ಳಲು ಸಿಎಂ ಸೂಚನೆ
ಮೈಸೂರು

ಸಿದ್ದಗಂಗಾ ಡಾ.ಶಿವಕುಮಾರಸ್ವಾಮೀಜಿ, ಆದಿಚುಂಚನಗಿರಿ ಬಾಲಗಂಗಾಧರನಾಥ ಶ್ರೀಗಳ ಹುಟ್ಟೂರಲ್ಲಿ ಸಾಂಸ್ಕೃತಿಕ, ಪಾರಂಪರಿಕ ಕೇಂದ್ರ ಕಾಮಗಾರಿ ಕೈಗೊಳ್ಳಲು ಸಿಎಂ ಸೂಚನೆ

June 13, 2020

ಬೆಂಗಳೂರು, ಜೂ. 12(ಕೆಎಂಶಿ)- ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಹಾಗೂ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಗಳ ಜನ್ಮಸ್ಥಳ ಬಾನಂದೂರಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರದ ಕಾಮಗಾರಿ ಯನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಪ್ರಗತಿ ಪರಿಶೀ ಲನೆ ನಡೆಸಿದರು. ಕೋವಿಡ್ 19ರ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದ 16,095 ಕಲಾವಿದರು, ಸಾಹಿತಿಗಳಿಗೆ ತಲಾ 2 ಸಾವಿರ ರೂ. ಗಳಂತೆ ಒಟ್ಟು 3.21 ಕೋಟಿ ರೂ. ಆರ್ಥಿಕ ನೆರವು ಒದಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ರಾಜ್ಯದ ಪ್ರವಾಸಿ ತಾಣಗಳ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧವಾಗಿವೆ. ಇವುಗಳನ್ನು ಹಂತಹಂತವಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕೆಎಸ್‍ಟಿಡಿಸಿ, ಜಂಗಲ್ ಲಾಡ್ಜಸ್ ಲಾಸ್: ಪ್ರವಾಸೋದ್ಯಮ ವಲಯದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಸುಮಾರು 15 ಸಾವಿರ ಕೋಟಿ ರೂ. ನಷ್ಟವಾಗಿದ್ದು, 3 ಲಕ್ಷ ಉದ್ಯೋಗ ಅಪಾಯದ ಅಂಚಿನಲ್ಲಿದೆ. ಕೆ.ಎಸ್.ಟಿ.ಡಿ.ಸಿ. ಸಂಸ್ಥೆ ಹಾಗೂ ಜಂಗಲ್ ಲಾಡ್ಜಸ್ ಸಂಸ್ಥೆಗೆ ಕ್ರಮವಾಗಿ 14 ಕೋಟಿ ರೂ. ಹಾಗೂ 15 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಕೋವಿಡ್-19ರ ಹಿನ್ನೆಲೆಯಲ್ಲಿ ಲಾಕ್‍ಡೌನ್‍ನಿಂದಾಗಿ ರಾಜ್ಯದಲ್ಲಿ ಸಿಲುಕಿಕೊಂಡ 6780 ವಿದೇಶಿ ಪ್ರವಾಸಿಗರನ್ನು ಸ್ವದೇಶಗಳಿಗೆ ಹಿಂತಿರುಗಲು ಸಮನ್ವಯ ಸಾಧಿಸಲಾಗಿದ್ದು, ಈ ಬಗ್ಗೆ ಪ್ರವಾಸಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಟ್ಟಾರೆಯಾಗಿ ಕಳೆದ ಆರ್ಥಿಕ ವರ್ಷದಲ್ಲಿ ಕೆಎಸ್‍ಟಿಡಿಸಿ ಕಳೆದ 12 ವರ್ಷಗಳಲ್ಲಿ ಅತೀ ಹೆಚ್ಚು ಅಂದರೆ 6.23 ಕೋಟಿ ಲಾಭ ಗಳಿಸಿದೆ. ಅಂತೆಯೇ ಜಂಗಲ್ ಲಾಡ್ಜಸ್ 7.86 ಕೋಟಿ ಲಾಭ ಪಡೆದಿದೆ.

Translate »