ಕೆಂಪೇಗೌಡರ ಅಂಚೆ ಚೀಟಿ ಬಿಡುಗಡೆಗೊಳಿಸಿದ ಸಿಎಂ
News

ಕೆಂಪೇಗೌಡರ ಅಂಚೆ ಚೀಟಿ ಬಿಡುಗಡೆಗೊಳಿಸಿದ ಸಿಎಂ

June 28, 2021

ಬೆಂಗಳೂರು, ಜೂ.27- ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯುಡಿಯೂರಪ್ಪ ಅವರು ಭಾನುವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ನಾಡ ಪ್ರಭುಗಳ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಅಂಚೆ ಚೀಟಿ ಲೋಕಾ ರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗಳಾದ ಡಾ.ಸಿ.ಎನ್.ಅಶ್ವಥ್ ನಾರಾ ಯಣ, ಗೋವಿಂದ ಕಾರಜೋಳ, ಸಚಿವ ಗೋಪಾಲಯ್ಯ, ಶಾಸಕ ಮುನಿರತ್ನ, ಶಾಸಕ ಮಂಜುನಾಥ್, ಸಂಸದ ಪಿ.ಸಿ. ಮೋಹನ್, ಶಾಸಕ ರಿಜ್ವಾನ್ ಅರ್ಷದ್, ಹೆಚ್.ಆರ್.ವಿಶ್ವನಾಥ್, ಆದಿ ಚುಂಚನ ಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದ ಲಿಂಗ ಸ್ವಾಮೀಜಿ, ಗುರುಗುಂಡ ಬ್ರಹ್ಮೇಶ್ವರ ಮಠ ನಂಜಾವಧೂತ ಸ್ವಾಮೀಜಿ ಇನ್ನಿ ತರರು ಭಾಗಿಯಾಗಿದ್ದರು.

ಬಳಿಕ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಬಹಳ ಸಂತೋಷ ದಿಂದ ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಗಳ ಆಶೀರ್ವಾದದೊಂದಿಗೆ ಕಂಚಿನ ಪುತ್ಥಳಿ ರೆಡಿಯಾಗುತ್ತಿದೆ. 2019ರಲ್ಲಿ ಅಧಿಕಾರ ವಹಿಸಿಕೊಂಡಾಗ ಸಿಎಂ ಬಿಎಸ್‍ವೈ ಮೊದಲು ಮಾಡಿದ ಕೆಲಸ ಅವರ ಪುತ್ಥಳಿ ನಿರ್ಮಾಣ ಕಾರ್ಯ. 23 ಎಕರೆ ಜಾಗದಲ್ಲಿ ನಿಮಾಣ ಮಾಡಲು ನಿರ್ಧಾರ ಮಾಡಿದ್ದಾರೆ. ಮುಂದಿನ ಫೆಬ್ರ ವರಿ ಅಥವಾ ಮಾರ್ಚ್‍ನಲ್ಲಿ ವಿಮಾನ ನಿಲ್ದಾಣದ ಮುಂದೆ ಕೆಂಪೇಗೌಡರ ಪುತ್ಥಳಿ ಲೋಕಾರ್ಪಣೆ ಆಗಲಿದೆ ಎಂದರು.

ಕೆಂಪಾಪುರದಲ್ಲೂ ಕೆಂಪೇಗೌಡರ ವೀರ ಸಮಾಧಿಯನ್ನು ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳ ಲಾಗಿದೆ. ಬೆಂಗಳೂರು ಬೇರೆ ಬೇರೆ ಹೆಸರು ಪಡೆದಿದೆ. ಕೆಂಪೇಗೌಡ ಜಯಂತಿಯನ್ನ ಬೆಂಗಳೂರು ಹಬ್ಬವಾಗಿ ಆಚರಣೆ ಮಾಡಬೇಕು. 2 ವರ್ಷಗಳ ಹಿಂದೆಯೇ ಚಿಂತನೆ ನಡೆದಿತ್ತು. ಆದರೆ ಕೊರೊನಾದಿಂದಾಗಿ ತಡೆಯಲಾಗಿತ್ತು. ಮುಂದಿನ ದಿನಗಳಲ್ಲಿ ಸೋಂಕು ಕಡಿಮೆ ಯಾದ ನಂತರ ಆಚರಣೆ ಮಾಡಬೇಕು. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ ಹಲವಾರು ಕೆಲಸಗಳನ್ನು ಮಾಡಲಾಗು ತ್ತಿದೆ ಎಂದರು. ಇದೇ ವೇಳೆ ನಮ್ಮ ಮೆಟ್ರೋ ಹೆಸರನ್ನು ನಮ್ಮ
ಕೆಂಪೇಗೌಡ ಮೆಟ್ರೋ ಅಥವಾ ಕೆಂಪೇಗೌಡ ಮೆಟ್ರೋ ಎಂದಾದರೂ ಬದಲಿಸಿ ಎಂದು ನಂಜಾವಧೂತ ಸ್ವಾಮೀಜಿ ಯಡಿಯೂರಪ್ಪನವರಿಗೆ ಮನವಿ ಮಾಡಿದರು. ವಿಧಾನಸೌಧದಲ್ಲೂ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಮಾಡುವಂತೆಯೂ ಯಡಿಯೂರಪ್ಪ ನವರಿಗೆ ಮನವಿ ಮಾಡಿಕೊಂಡರು. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೂ ಅತ್ಯುತ್ತಮ ಅಧ್ಯಕ್ಷರ ನೇಮಕ ಮಾಡಿ ಎಂದು ನಂಜಾವಧೂತ ಸ್ವಾಮೀಜಿ ಹೇಳಿದರು.

ಟ್ವಿಟರ್‍ನಲ್ಲಿ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ: ನಾಡಪ್ರಭು ಕೆಂಪೇ ಗೌಡರ 512ನೇ ಜಯಂತಿ ಹಿನ್ನೆಲೆ, ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ. ವ್ಯಾಪಾರ ವಹಿವಾಟಿಗೆ ಅನೇಕ ಪೇಟೆಗಳನ್ನು ಕಟ್ಟಿ. ಅತ್ಯಂತ ಯೋಜನಾಬದ್ಧವಾಗಿ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರ ಸಂಸ್ಮರಣೆಗಳ ಜೊತೆಗೆ ಆ ಧೀಮಂತ ಆಡಳಿತಗಾರನಿಗೆ ಅನಂತ ಪ್ರಣಾಮ ಸಲ್ಲಿಸೋಣ ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವಿಟರ್‍ನಲ್ಲಿ ಶುಭಾಶಯ ಕೋರಿದ್ದಾರೆ.

Translate »