ಸರ್ಕಾರ ಉರುಳಿಸಲು ದಂಧೆಕೋರರ ಯತ್ನ : ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ಕಂಗಾಲು
ಮೈಸೂರು

ಸರ್ಕಾರ ಉರುಳಿಸಲು ದಂಧೆಕೋರರ ಯತ್ನ : ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ಕಂಗಾಲು

September 16, 2018

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಉರುಳಿಸಲು ಅಕ್ರಮ ದಂಧೆ ನಡೆಸುವ ಕಿಂಗ್‍ಪಿನ್‍ಗಳ ಸಹಕಾರವಿದೆ ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಆರೋಪದಿಂದ ವಿಚಲಿತವಾಗಿರುವ ಪ್ರತಿಪಕ್ಷ ಬಿಜೆಪಿ ಆರೋಪ ಕುರಿತು ತನಿಖೆ ನಡೆಸಬೇಕು ಇಲ್ಲವೇ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿದೆ. ಜಂಟಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಬಿಜೆಪಿ ನಾಯಕರಾದ ಆಯನೂರು ಮಂಜುನಾಥ್, ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತಿತರರು, ಯಾವುದೇ ಕಾರಣಕ್ಕೂ ಸರ್ಕಾರ ಪತನಕ್ಕೆ ಬಿಜೆಪಿ ಪ್ರಯತ್ನಿಸು ತ್ತಿಲ್ಲ, ಮುಖ್ಯಮಂತ್ರಿ ಕುಮಾರಸ್ವಾಮಿ ಹಿಟ್ ಆಂಡ್ ರನ್ ಆರೋಪ ಮಾಡುತ್ತಿದ್ದಾರೆ ಎಂದರು.

ಗುಪ್ತಚರ ವಿಭಾಗ ಮುಖ್ಯಮಂತ್ರಿ ಬಳಿಯೇ ಇದೆ, ತನಿಖೆಗೆ ಹಿಂಜರಿಕೆ ಏಕೆ, ಸಮ್ಮಿಶ್ರ ಸರ್ಕಾರದ ಆಂತರಿಕ ಕಚ್ಚಾಟಕ್ಕೆ ಬಿಜೆಪಿಯನ್ನು ಹೊಣೆ ಮಾಡು ವುದು ಸರಿಯಲ್ಲ. ಸರ್ಕಾರ ಅಸ್ತಿತ್ವಕ್ಕೆ ಬಂದ ದಿನ ದಿಂದಲೂ ಸಂಪುಟ ವಿಸ್ತರಣೆ, ನಿಗಮ-ಮಂಡಳಿ ಗಳಿಗೆ ನೇಮಕಾತಿ ವಿವಾದಕ್ಕೆ ಸಿಲುಕಿದೆ ಎಂದರು.

Translate »