ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಅನುಮತಿ ನೀಡಲು ಕೇಂದ್ರಕ್ಕೆ ಸಿಎಂ ಕುಮಾರಸ್ವಾಮಿ ಮನವಿ
ಮೈಸೂರು

ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಅನುಮತಿ ನೀಡಲು ಕೇಂದ್ರಕ್ಕೆ ಸಿಎಂ ಕುಮಾರಸ್ವಾಮಿ ಮನವಿ

June 16, 2019

ಬೆಂಗಳೂರು: ಕುಡಿಯುವ ನೀರು ಹಾಗೂ ವಿದ್ಯುತ್ ಉತ್ಪಾದನೆ ಉದ್ದೇಶದಿಂದ ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಸಮಾನಾಂತರವಾಗಿ ಮೇಕೆದಾಟುವಿನಲ್ಲಿ ನಿರ್ಮಿಸಲಿರುವ ಜಲಾ ಶಯಕ್ಕೆ ತಕ್ಷಣವೇ ಅನುಮತಿ ನೀಡ ಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ನಡೆ ಸಿದ ಸಮಾಲೋಚನೆ ಸಂದರ್ಭದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿ ಸುತ್ತಿರುವ ಈ ಅಣೆಕಟ್ಟೆಯ ಮಹತ್ವ ವನ್ನು ಎಳೆಎಳೆಯಾಗಿ ಬಿಡಿಸಿಟ್ಟರು.

ಕರ್ನಾಟಕ ಮತ್ತು ತಮಿಳುನಾಡು ಗಡಿ ಭಾಗದಲ್ಲಿ ಜಲಾಶಯ ನಿರ್ಮಾಣ ಮಾಡಲು ಹೊರಟಿರುವುದರಿಂದ ನಾವು ಕೃಷಿ ಚಟುವಟಿಕೆಗೆ ನೀರು ಬಳಕೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ.

ವಿಶ್ವ ಮಟ್ಟದಲ್ಲಿ ಹೆಸರು ಗಳಿಸಿರುವ ನಗರಗಳ ಸಾಲಿನಲ್ಲಿರುವ ಬೆಂಗಳೂರು ನಗರಕ್ಕೆ ಕೊರತೆಯಾಗಿರುವ 4.75 ಟಿಎಂಸಿ ನೀರನ್ನು ಕುಡಿಯಲು ಬಳಕೆ ಮಾಡಿಕೊಳ್ಳಲು ಮತ್ತು ನಗರದ ಸುತ್ತ ಮುತ್ತಲಿನ ಪಟ್ಟಣ ಮತ್ತು ಗ್ರಾಮೀಣ ಭಾಗಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಸುವುದು ಅಲ್ಲದೆ, 400 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನಾ ಯೋಜನೆ ಇದಾಗಿದೆ. ನದಿ ನೀರು ಹಂಚಿಕೆ ಸಂಕಷ್ಟ ಸಂದರ್ಭದಲ್ಲಿ ಹಿಡಿದಿಟ್ಟ ನೀರನ್ನು ತಮಿಳುನಾಡಿಗೆ ಹರಿಸಲು ಸಹಕಾರಿ ಯಾಗುವುದಲ್ಲದೆ, ಉತ್ಪಾದಿತ ವಿದ್ಯುತ್ ನಲ್ಲಿ ಆ ರಾಜ್ಯಕ್ಕೂ

ಪಾಲು ನೀಡುತ್ತೇವೆ ಎಂದು ವಿವರಿಸಿದ್ದಾರೆ. ಕಾವೇರಿ ನ್ಯಾಯಾಧೀಕರಣದ ತೀರ್ಪಿನಂತೆ ತಮಿಳುನಾಡಿಗೆ ಸಲ್ಲಬೇಕಾದ ನೀರನ್ನು ಬಿಡುತ್ತೇವೆ, ಉಳಿದ ನೀರನ್ನು ನಾವು ಹೇಗಾದರೂ ಬಳಕೆ ಮಾಡಿಕೊಳ್ಳಬಹುದು, ಹೀಗಾಗಿ ಯೋಜನೆಗೆ ಆ ರಾಜ್ಯ ಸರ್ಕಾರದ ಅನುಮತಿ ಬೇಕಿಲ್ಲ ಎಂದು ಒತ್ತಿ ಹೇಳಿದ್ದಾರೆ. ಈ ವರ್ಷದ ಜನವರಿ 18ರಲ್ಲಿ ಯೋಜನೆಯ ಸಮಗ್ರ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿದ್ದೇವೆ, ತಕ್ಷಣವೇ ಜಲಾಶಯ ನಿರ್ಮಾಣಕ್ಕೆ ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿಗಳ ಮನವಿಗೆ ಸ್ಪಂದಿಸಿದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಮಹದಾಯಿ ಮತ್ತು ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸಲು ಸಂಬಂಧಪಟ್ಟ ರಾಜ್ಯಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಮಹದಾಯಿ ನ್ಯಾಯಾಧೀಕರಣ ನೀರು ಹಂಚಿಕೆ ಕುರಿತ ತೀರ್ಪನ್ನು ಸಹ ಗೆಜೆಟ್ ಅಧಿಸೂಚನೆ ಹೊರಡಿಸದೆ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿ ಸಾಧ್ಯವಾಗಿಲ್ಲ ಎಂದು ವಿವರಿಸಿದರು.

Translate »