2ನೇ ದಿನವೂ ಕೊಡಗಲ್ಲಿ ವೈಮಾನಿಕ  ಸಮೀಕ್ಷೆ ನಡೆಸಿದ ಸಿಎಂ ಕುಮಾರಸ್ವಾಮಿ
ಮೈಸೂರು

2ನೇ ದಿನವೂ ಕೊಡಗಲ್ಲಿ ವೈಮಾನಿಕ  ಸಮೀಕ್ಷೆ ನಡೆಸಿದ ಸಿಎಂ ಕುಮಾರಸ್ವಾಮಿ

August 20, 2018

ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ, ಸಂತ್ರಸ್ತರಿಗೆ ಅಭಯ
ಮಡಿಕೇರಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 2ನೇ ದಿನವಾದ ಇಂದೂ ಸಹ ಕೊಡಗಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಿದರು. ನಂತರ ಮಡಿಕೇರಿ-ಮಂಗಳೂರು ರಸ್ತೆ ಕುಸಿದಿರುವ ಪ್ರದೇಶವನ್ನು ವೀಕ್ಷಿಸಿದರು. ಮಡಿಕೇರಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಗುಡ್ಡ ಕುಸಿದು ಅಂಗಡಿ ಗಳು ನೆಲಸಮವಾಗಿರುವುದನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ಅಲ್ಲಿ ಹೊಸದಾಗಿ ಅಂಗಡಿ ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇಂದೂ ಕೂಡ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿದ ಸಿಎಂ, ಮಳೆ ನಿಲ್ಲುವವರೆಗೂ ಸ್ವಲ್ಪ ಸಮಾಧಾನದಿಂದ ಇರಿ. ನಂತರ ಸಮರೋಪಾದಿಯಲ್ಲಿ ನಿಮಗೆ ಅನುಕೂಲಗಳನ್ನು ಕಲ್ಪಿಸಲಾಗುತ್ತದೆ ಎಂದರು. ಅಲ್ಲದೇ ಇನ್ನು ಮೂರೇ ದಿನಗಳಲ್ಲಿ ತಾತ್ಕಾಲಿಕ ಶೆಡ್‍ಗಳನ್ನು ನಿರ್ಮಿಸಿಕೊಡುವು ದಾಗಿಯೂ, ನಂತರ ಮನೆ ಕಳೆದುಕೊಂಡವರಿಗೆ ವಿವಿಧ ಯೋಜನೆಗಳಲ್ಲಿ ಮನೆಗಳನ್ನು ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು. ನಿರಾಶ್ರಿತರ ಶಿಬಿರಗಳಲ್ಲಿ ಶೌಚಾಲಯದ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿದ ಸಿಎಂ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಬಿಬಿಎಂಪಿಯಿಂದ ಸಿಬ್ಬಂದಿ ಹಾಗೂ ತಾತ್ಕಾಲಿಕ ಶೌಚಾಲಯಗಳು ಆಗಮಿಸುತ್ತಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.

Translate »