ರಾಹುಲ್ ಕರೆ ಮೇರೆಗೆ ದೆಹಲಿಗೆ ತೆರಳಿದ ಸಿಎಂ ಕುಮಾರಸ್ವಾಮಿ
ಮೈಸೂರು

ರಾಹುಲ್ ಕರೆ ಮೇರೆಗೆ ದೆಹಲಿಗೆ ತೆರಳಿದ ಸಿಎಂ ಕುಮಾರಸ್ವಾಮಿ

May 21, 2019

ಬೆಂಗಳೂರು: ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಹೊರ ಬೀಳುತ್ತಿದ್ದಂತೆಯೇ ಯುಪಿಎ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾ ಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆಯ ಮೇರೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದರು. ನಿನ್ನೆಯಿಂದಲೇ ದೆಹಲಿಯಲ್ಲಿ ಬೀಡು ಬಿಟ್ಟಿರುವ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಚರ್ಚೆ ನಡೆಸಿದ ಬಳಿಕ ಬಿರುಸಿನ ಚಟುವಟಿಕೆಗಳು ಆರಂಭಗೊಂಡಿವೆ. ಯುಪಿಎ ಜೊತೆಗಿರುವ ಬಿಜೆಪಿಯೇತರ ಮುಖ್ಯಮಂತ್ರಿಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರ ಸಭೆಯನ್ನು ನವದೆಹಲಿಯಲ್ಲಿ ರಾಹುಲ್ ಗಾಂಧಿಯವರು ಕರೆದಿದ್ದಾರೆ. ಚುನಾವಣಾ ಫಲಿತಾಂಶ ಹೊರ ಬಿದ್ದ ನಂತರ ದೇಶದಲ್ಲಿ ಬಿಜೆಪಿಯೇತರ ಸರ್ಕಾರವನ್ನು ಅಸ್ಥಿತ್ವಕ್ಕೆ ತರುವ ಸಾಧ್ಯಾಸಾಧ್ಯತೆ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಲಾಗಿದೆ. ಯುಪಿಎ ಮೈತ್ರಿ ಪಕ್ಷಗಳು ಮಾತ್ರವಲ್ಲದೆ. ಇತರ ಪಕ್ಷಗಳ ಬೆಂಬಲವನ್ನು ಪಡೆಯುವ ನಿಟ್ಟಿನಲ್ಲಿ ಚಂದ್ರಬಾಬು ನಾಯ್ಡು ಅವರು ಕಾರ್ಯೋನ್ಮುಖರಾಗಿದ್ದು, ಈ ಸಂಬಂಧ ನಾಳಿನ ಸಭೆಯಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತದೆ ಎಂದು ಹೇಳಲಾಗಿದೆ.

Translate »