ಜು.19, 20 ಕೊಡಗಿನಲ್ಲಿ ಸಿಎಂ ಕುಮಾರಸ್ವಾಮಿ ತಲಕಾವೇರಿಯಲ್ಲಿ ಪೂಜೆ, ಅಧಿಕಾರಿಗಳ ಸಭೆ
ಕೊಡಗು

ಜು.19, 20 ಕೊಡಗಿನಲ್ಲಿ ಸಿಎಂ ಕುಮಾರಸ್ವಾಮಿ ತಲಕಾವೇರಿಯಲ್ಲಿ ಪೂಜೆ, ಅಧಿಕಾರಿಗಳ ಸಭೆ

July 15, 2018

ಮಡಿಕೇರಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜುಲೈ 19 ಮತ್ತು 20 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿ ದ್ದಾರೆ ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದರು.

ನಗರದ ಹೋಟೆಲ್ ಮಯೂರ ವ್ಯಾಲಿ ವ್ಯೂನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜುಲೈ 19 ರಂದು ಮಧ್ಯಾಹ್ನ 3 ಗಂಟೆಗೆ ನಗರ ದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿ ದ್ದಾರೆ. ಜೊತೆಗೆ ತಲಕಾವೇರಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದರು.

ಜಿಲ್ಲೆಯಲ್ಲಿ ಜೂನ್ ಮೊದಲ ಮತ್ತು ಎರಡನೇ ವಾರ ಹಾಗೂ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಹೆಚ್ಚಿನ ಹಾನಿಯಾಗಿದ್ದು, ಈ ಸಂಬಂಧ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಪ್ರತಿ ನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಚರ್ಚಿಸಲಿದ್ದಾರೆ ಎಂದು ಹೇಳಿದರು.

Translate »