ಇಂದು ಮೈಸೂರಿಗೆ ಸಿಎಂ ಕುಮಾರಸ್ವಾಮಿ
ಮೈಸೂರು

ಇಂದು ಮೈಸೂರಿಗೆ ಸಿಎಂ ಕುಮಾರಸ್ವಾಮಿ

September 11, 2018

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಅವರು ನಾಳೆ (ಸೆ.11) ಮೈಸೂ ರಿಗೆ ಆಗಮಿಸುವರು. ರಸ್ತೆ ಮೂಲಕ ಕಾರಿನಲ್ಲಿ ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ ಮೈಸೂರಿಗೆ ಆಗಮಿಸಲಿರುವ ಮುಖ್ಯಮಂತ್ರಿಗಳು, ಕಲಾಮಂದಿರದ ಸುಚಿತ್ರಾ ಕಲಾ ಗ್ಯಾಲರಿಯಲ್ಲಿ ಮೈಸೂರು ನಗರ ಪತ್ರಿಕಾ ಛಾಯಾಗ್ರಾಹಕರ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾ ಚರಣೆ ಅಂಗವಾಗಿ ಏರ್ಪಡಿಸಿರುವ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾ ಟಿಸುವರು. ಬೆಳಿಗ್ಗೆ 11.30 ಗಂಟೆಗೆ ಮಹಾರಾಣಿ ಮಹಿಳಾ ಕಲಾ ಕಾಲೇಜಿ ನಲ್ಲಿ ಏರ್ಪಡಿಸಿರುವ ಸಾಂಸ್ಕøತಿಕ ವೇದಿಕೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳನ್ನು ಉದ್ಘಾಟಿಸಲಿರುವ ಕುಮಾರಸ್ವಾಮಿ ಅವರು, ಮಧ್ಯಾಹ್ನ1 ಗಂಟೆಗೆ ಪಡುವಾರಹಳ್ಳಿ ಬಳಿಯ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಎನ್‍ಎಸ್‍ಎಸ್, ಎನ್‍ಸಿಸಿ ಘಟಕಗಳ ಅನಾವರಣ ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್ ಮತ್ತು ರೆಡ್‍ಕ್ರಾಸ್ ಚಟುವಟಿಕೆಗಳನ್ನು ಉದ್ಘಾಟಿಸುವರು.

ಸಂಜೆ 4 ಗಂಟೆಗೆ ಕಾರಿನಲ್ಲಿ ರಸ್ತೆ ಮೂಲಕ ಮುಖ್ಯಮಂತ್ರಿಗಳು ಬೆಂಗಳೂರಿಗೆ ಹಿಂದಿರುಗುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Translate »