ಸಿಎಂ ಕುಮಾರಸ್ವಾಮಿ-ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ
ಮೈಸೂರು

ಸಿಎಂ ಕುಮಾರಸ್ವಾಮಿ-ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ

December 27, 2018

ನವದೆಹಲಿ: ಸಿಎಂ ಕುಮಾರಸ್ವಾಮಿ ಇಂದು ನವದೆಹಲಿಯಲ್ಲಿ ಕೇಂದ್ರ ಭೂ ಹೆದ್ದಾರಿ ಮತ್ತು ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದಾರೆ.

ಉಭಯ ನಾಯಕರು ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಹಾಗೂ ಮೇಕೆದಾಟು ಯೋಜನೆ ಸಂಬಂಧ ಚರ್ಚೆ ನಡೆಸಿದ್ದಾರೆ. ಮೇಕೆದಾಟು ಯೋಜನೆಗೆ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿರುವ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿ ನಡೆಸಲು ಕೇಂದ್ರ ಸಚಿವ ಗಡ್ಕರಿ ಸಮ್ಮತಿಸಿದ್ದಾರೆ.

ಮೇಕೆದಾಟು ಯೋಜನೆ ಯಿಂದಾಗಿ ಎರಡೂ ರಾಜ್ಯಗಳಿಗೆ ಲಾಭವಾಗಲಿದೆ, ಅದರಲ್ಲಿಯೂ ತಮಿಳುನಾಡಿಗೆ ಹೆಚ್ಚಿನ ಲಾಭ ದೊರೆಯಲಿದೆ ಎಂದು ಮುಖ್ಯಮಂತ್ರಿಗಳು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ್ದಾರೆ.

Translate »