ನಾಳೆ ಬೇಲೂರಿಗೆ ಸಿಎಂ ಕುಮಾರಸ್ವಾಮಿ ಭೇಟಿ
ಹಾಸನ

ನಾಳೆ ಬೇಲೂರಿಗೆ ಸಿಎಂ ಕುಮಾರಸ್ವಾಮಿ ಭೇಟಿ

February 25, 2019

ಬೇಲೂರು: ಇದೇ 26 ರಂದು ಪಟ್ಟಣಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಲಿದ್ದು, ಸುಮಾರು 500 ಕೋಟಿ ರೂ. ವೆಚ್ಚದಡಿ ತಾಲೂಕಿನ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಕೆ.ಎಸ್.ಲಿಂಗೇಶ್ ತಿಳಿಸಿದರು.

ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಜನತೆಯ ಹಲವು ವರ್ಷಗಳ ಬೇಡಿಕೆ ಯಾದ ತಾಲೂಕಿನ ವಿವಿಧ ಕಾಮಗಾರಿ ಗಳಿಗೆ ಗುದ್ದಲಿ ಪೂಜೆ ಹಾಗೂ ನೂತನ ಕಟ್ಟಡಗಳ ಉದ್ಘಾಟನೆ ನೆರವೇರಿಸಲು ಫೆ.26ರಂದು ಮಧ್ಯಾಹ್ನ ಹಳೇಬೀಡಿನ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಅಭಿವೃದ್ಧಿ ಕಾಮಗಾ ರಿಗೆ ಚಾಲನೆ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಲಾ ಕಾಲೇಜುಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದರು.

ಪ್ರಮುಖವಾಗಿ ಹಲವು ವರ್ಷಗಳ ಬೇಡಿಕೆಯಾಗಿದ್ದ ಹಳೇಬೀಡು ಮಾದಿಹಳ್ಳಿ ಬಳಿ ಭಾಗದ ಕೆರೆ ಕಟ್ಟೆಗಳ ಭರ್ತಿ ಹಾಗೂ ತಾಲೂಕಿನಾದ್ಯಂತ ಕುಡಿಯುವ ನೀರು, ರಸ್ತೆ, ಚರಂಡಿ ಹಾಗೂ ವಿವಿಧ ಇಲಾಖೆ ಗಳಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ತಾಲೂಕು ಜೆಡಿಎಸ್ ಅಧ್ಯಕ್ಷ ತೋಚ ಅನಂತ ಸುಬ್ಬರಾಯ ಮಾತನಾಡಿ, ಇದೇ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಬೇಲೂರಿಗೆ ಆಗಮಿಸ ಲಿದ್ದು, 30 ಲಕ್ಷ ವೆಚ್ಚದಲ್ಲಿ ಗೆಂಡೆ ಹಳ್ಳಿಯ ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಲಿ ದ್ದಾರೆ. ಪಶುವೈದ್ಯ ಶಾಲೆ ಮತ್ತು 90 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕಾಲೇಜು ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ರಂಗೇಗೌಡ ಇದ್ದರು.

Translate »