ಸಮಗ್ರ ತನಿಖೆಗೆ ಸಿಎಂ ಆದೇಶ
ಮೈಸೂರು

ಸಮಗ್ರ ತನಿಖೆಗೆ ಸಿಎಂ ಆದೇಶ

January 25, 2021

ಬೆಂಗಳೂರು,ಜ.24-ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ) ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪ್ರಕರಣ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.

ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಯಡಿ ಯೂರಪ್ಪ ಅವರು, ಎಫ್‍ಡಿಎ ಪ್ರಶ್ನೆಪತ್ರಿಕೆ ಪರೀಕ್ಷೆಗೂ ಮುನ್ನವೇ ಬಹಿರಂಗೊಂಡಿರುವ ವಿಚಾರ ಅಕ್ಷಮ್ಯ ಅಪರಾಧ, ಈ ಬಗ್ಗೆ ಅಧಿಕಾರಿಗಳಿಂದ ರಾತ್ರಿಯೇ ಮಾಹಿತಿ ಪಡೆಯಲಾಗಿದೆ. ಪ್ರಕರಣ ಸಂಬಂಧ ಸಮಗ್ರ ತನಿಖೆಗೆ ಆದೇಶಿಸಲಾಗಿದ್ದು, ಈಗಾಗಲೇ ತಪ್ಪಿತಸ್ಥರ ಬಂಧವಾಗಿದೆ ಎಂದು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಭಾಗಿಯಾಗಿರುವ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಈಗಾ ಗಲೇ ಸೂಚಿಸಿದ್ದೇನೆ. ಅಗತ್ಯ ಬಿದ್ದರೆ ಹುದ್ದೆಯಿಂದ ವಜಾಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಅಪರಾಧ ವಿಭಾಗದ ಜಂಟಿ ಪೆÇಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು, ಈವರೆಗೂ 14 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದೆ. ಆರೋಪಿಗಳಿಂದ ರೂ. 35 ಲಕ್ಷ ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ. ಪ್ರಕರಣದ ಮುಖ್ಯ ಸೂತ್ರಧಾರ ಚಂದ್ರು, ರಾಚಪ್ಪ ಸೇರಿದಂತೆ 14 ಆರೋಪಿಗಳು ನೀಡಿರುವ ಮಾಹಿತಿ ಆಧರಿಸಿ, ಮತ್ತಷ್ಟು ಆರೋಪಿಗಳ ಬಂಧನಕ್ಕೆ ಸಿಸಿಬಿ ಪೆÇಲೀಸರು ಬೀಸಿದ್ದಾರೆ. ತನಿಖಾ ದೃಷ್ಟಿಯಿಂದ ಪ್ರಶ್ನೆ ಪತ್ರಿಕೆ ಸೋರಿಕೆಯ ಕಿಂಗ್ ಪಿನ್ ಅಧಿಕಾರಿಯ ಹೆಸರನ್ನು ಸಿಸಿಬಿ ಅಧಿಕಾರಿಗಳು ಬಹಿರಂಗ ಪಡಿ ಸಿಲ್ಲ. ಆದರೆ ಆ ಅಧಿಕಾರಿಯೇ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡಿದ್ದು ಅವರ ಕಚೇರಿಯಿಂದ ಪ್ರಶ್ನೆ ಪತ್ರಿಕೆಗಳನ್ನು ಹೊರತಂದು ಆರೋಪಿ ಚಂದ್ರುಗೆ ನೀಡಿದ್ದ. ಬಳಿಕ ಚಂದ್ರು ಅವುಗಳನ್ನು ಉಲ್ಲಾಳದ ಆರ್.ಆರ್. ರೆಸಿಡೆನ್ಸಿಯ ಫ್ಲಾಟ್ನಲ್ಲಿಟ್ಟಿದ್ದ. ನಂತರ ತಾವು ಹಾಕಿಕೊಂಡ ಯೋಜನೆಯಂತೆ ಇನ್ನುಳಿದ ರಾಜ್ಯದ ವಿವಿ ಧೆಡೆಯ ಮಧ್ಯವರ್ತಿಗಳಿಗೆ ಸರಬರಾಜು ಮಾಡಲು ಸಂಚು ರೂಪಿಸಿದ್ದ ಎಂದು ತಿಳಿದುಬಂದಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದೆ ಕೆಪಿಎಸ್‍ಸಿ ಕಚೇರಿಯ ಇಬ್ಬರು ಸಿಬ್ಬಂದಿಗಳ ಮೇಲೆ ಸಿಸಿಬಿ ಅಧಿ ಕಾರಿಗಳಿಗೆ ಅನುಮಾನ ವ್ಯಕ್ತವಾಗಿದೆ. ಇಬ್ಬರೂ ಶಂಕಿತರ ಪೆÇೀನ್ ಸ್ವಿಚ್ ಆಫ್ ಆಗಿದೆ. ಬಂಧಿತರು ನೀಡಿರುವ ಮಾಹಿತಿ ಮೇರೆಗೆ ಎಫ್‍ಡಿಎ ದರ್ಜೆಯ ಅಧಿಕಾರಿಗಳ ಮೇಲೆ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾಗಿರುವ ಶಂಕಿತರಿಗೆ ಸಿಸಿಬಿ ಅಧಿಕಾರಿಗಳು ಬಲೆ ಬೀಸಿದ್ದಾರೆ. ಎಫ್‍ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆ ಸಿಸಿಬಿ ಪೆÇಲೀಸರು ಕಾರ್ಯಾಚರಣೆ ಮಾಡಿ ಅವ್ಯವಹಾರ ಭೇದಿಸಿ ಕೆಲವರನ್ನು ಬಂಧಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ಯಾರ್ಯಾರಿದ್ದಾರೆ ಅಂತ ಪೆÇಲೀಸರು ತನಿಖೆ ಕೈಗೊಂಡಿದ್ದಾರೆ. ಅತೀ ಶೀಘ್ರದಲ್ಲೇ ಪ್ರಕರಣದ ಹಿಂದೆ ಇರುವವರ ಬಂಧನ ಮಾಡುತ್ತೇವೆ. ಪ್ರಶ್ನೆ ಪತ್ರಿಕೆಗಳನ್ನು ಅತ್ಯಂತ ಸುರಕ್ಷತೆಯಿಂದ ಇಡಲಾಗುತ್ತದೆ. ಸುರಕ್ಷತೆ ಇದ್ದರೂ ಹೇಗೆ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿವೆ ಅನ್ನೋದು ಮಹತ್ವದ ಪ್ರಶ್ನೆಯಾಗಿದೆ. ಈ ಪ್ರಕರಣವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಎಷ್ಟೇ ಪ್ರಭಾವಿಗಳಿದ್ದರೂ ಪ್ರಕರಣಕ್ಕೆ ಕಾರಣರಾದವರನ್ನು ಬಂಧಿಸುತ್ತೇವೆ. ಸದ್ಯಕ್ಕೆ ಬಂಧಿತರ ವಿಚಾರಣೆ ನಡೆಸಿ ತನಿಖೆ ಕೈಗೊಳ್ಳುತ್ತೇವೆ ಎಂದಿದ್ದಾರೆ.

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಸಕ್ರಮಗೊಳಿಸುವುದಾಗಿ ಹೇಳಿಲ್ಲ
ಶಿವಮೊಗ್ಗ: ಅಕ್ರಮ ಕಲ್ಲು ಗಣಿಗಾರಿಕೆಯ ಸಕ್ರಮಕ್ಕೆ ಅರ್ಜಿ ಸಲ್ಲಿಸಿ ಎಂದು ಹೇಳಿ ತೀವ್ರ ಟೀಕೆಗೆ ಗುರಿಯಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ತಮ್ಮ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ, ಅಕ್ರಮ ಗಣಿಗಾರಿಕೆ ನಡೆಸುವವರು ಸಕ್ರಮಗೊಳಿಸಲು ಅರ್ಜಿ ಸಲ್ಲಿಸ ಬೇಕು, ಕಾನೂನಿನಲ್ಲಿ ಅವಕಾಶವಿದ್ದರೆ ಮಾತ್ರ ಅಂತವರ ಗಣಿಗಾರಿಕೆ ಯನ್ನು ಸಕ್ರಮಗೊಳಿಸಲಾಗುವುದು ಎಂದು ಹೇಳಿದ್ದೆ ಎಂದಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ ಬರುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಕಟ್ಟಳೆಗಳನ್ನು ಪೂರೈಸುವ ಗಣಿಗಾರಿಕೆ ಗಳನ್ನು ಮಾತ್ರ ಸಕ್ರಮಗೊಳಿಸುವಂತೆ ನಾನು ಸಂಬಂಧಪಟ್ಟ ಅಧಿ ಕಾರಿಗಳಿಗೆ ಹೇಳಿದ್ದೇನೆ. ಅಕ್ರಮ ಗಣಿಗಾರಿಕೆ ಮಾಡುತ್ತಿದ್ದರೆ ಅಧಿಕಾರಿ ಗಳನ್ನು ಹೊಣೆಗಾರರನ್ನಾಗಿಸಲಾಗುವುದು ಎಂದರು. ಎಲ್ಲಾ ಅಕ್ರಮ ಗಣಿಗಾರಿಕೆಗಳನ್ನು ತಕ್ಷಣವೇ ನಿಲ್ಲಿಸಲಾಗುವುದು. ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಹೇಳಿದ್ದೇನೆ. ಅಕ್ರಮ ಗಣಿಗಾರಿಕೆ ಮಾಡುವವರು ಸಕ್ರಮಗೊಳಿಸಲು ಅರ್ಜಿ ಸಲ್ಲಿಸ ಬೇಕು. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಾರೆ. ಮುಖ್ಯಮಂತ್ರಿಯಾಗಿ ನನ್ನ ಸಾಮಥ್ರ್ಯದೊಳಗೆ ಗಣಿಗಾರಿಕೆಯಿಂದ ಆಯಾ ಸ್ಥಳದ ಸುತ್ತಮುತ್ತ ಯಾವುದೇ ಸಮಸ್ಯೆಯಿಲ್ಲದಿದ್ದರೆ ಅಧಿಕಾರಿಗಳು ಗಣಿಗಾರಿಕೆ ಮುಂದುವರಿಸಲು ಅನುಮತಿ ನೀಡು ತ್ತಾರೆ. ಅಂದರೆ ಇದರರ್ಥ ಅಕ್ರಮವಾಗಿ ಗಣಿಗಾರಿಕೆ ನಡೆಸು ವವರು ತಕ್ಷಣವೇ ನಿಲ್ಲಿಸಬೇಕು ಎಂಬುದಾಗಿದೆ ಎಂದರು.