ಪೆÇೀಲಿಯೋ ಲಸಿಕೆ ಅಭಿಯಾನಕ್ಕೆ ಸಿಎಂ ಚಾಲನೆ
News

ಪೆÇೀಲಿಯೋ ಲಸಿಕೆ ಅಭಿಯಾನಕ್ಕೆ ಸಿಎಂ ಚಾಲನೆ

February 28, 2022

ಬೆಂಗಳೂರು, ಫೆ.27- ಆರೋಗ್ಯ ಇಲಾಖೆ ರಾಜ್ಯದಾದ್ಯಂತ ಪಲ್ಸ್ ಪೆÇೀಲಿಯೋ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಚಾಲನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ 4 ವರ್ಷದ ಒಳಗಿನ ಮಗುವಿಗೆ ಪೆÇೀಲಿಯೋ ಲಸಿಕೆ ಹಾಕುವ ಮೂಲಕ ಮುಖ್ಯಮಂತ್ರಿಗಳು ಅಭಿಯಾನಕ್ಕೆ ಚಾಲನೆ ನೀಡಿದರು. ಈ ವೇಳೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಪಂಚಮಸಾಲಿ ಹರಿಹರ ಗುರುಪೀಠದ ಶ್ರೀ ವಚನಾನಂದ ಸ್ವಾಮೀಜಿ ಹಾಗೂ ಇತರರು ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯು ರಾಜ್ಯದಾದ್ಯಂತ 5 ವರ್ಷದೊಳಗಿನ 64.77 ಲಕ್ಷ ಮಕ್ಕಳಿಗೆ ಪೆÇೀಲಿಯೋ ಹನಿ ಹಾಕುವ ಗುರಿಯನ್ನು ಹೊಂದಿದೆ. ಕೊರೋನಾ ಮೂರನೇ ಅಲೆಯಿಂದಾಗಿ ಕಳೆದ ಜನವರಿ ತಿಂಗಳಿನಲ್ಲಿ ನಡೆಯಬೇಕಾದ ಪೆÇೀಲಿಯೋ ಅಭಿಯಾನವನ್ನು ಮುಂದೂಡಲಾಗಿತ್ತು.

ಆರೋಗ್ಯ ಇಲಾಖೆಯು 1.08 ಲಕ್ಷ ಕಾರ್ಯಕರ್ತರನ್ನು ಬಳಸಿಕೊಂಡು ಅಗತ್ಯ ವ್ಯವಸ್ಥೆ ಮಾಡಿಕೊಂಡಿದೆ. ರಾಜ್ಯದ ಎಲ್ಲಾ ಆಸ್ಪತ್ರೆಗಳು, ಗ್ರಾಮೀಣ ಪ್ರದೇಶ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ರಾಜ್ಯಾದ್ಯಂತ 33,223 ಬೂತ್‍ಗಳನ್ನು ತೆರೆದಿದೆ. ಮನೆ ಮನೆ ಭೇಟಿಗೆ 45,933 ತಂಡಗಳು, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಪೆÇೀಲಿಯೋ ಹನಿ ಹಾಕಲು 960 ಸಂಚಾರಿ ತಂಡಗಳನ್ನು ನಿಯೋಜಿಸಲಾಗಿದೆ.

Translate »