ಇಂದು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ
ಚಾಮರಾಜನಗರ

ಇಂದು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ

May 7, 2018

ಚಾಮರಾಜನಗರ:  ಮುಖ್ಯ ಮಂತ್ರಿ ಸಿದ್ದರಾಮಯ್ಯ ನಾಳೆ (ಮೇ 7) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಹನೂರಿನ ಮಲೈ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿ ರುವ ಸಾರ್ವಜನಿಕ ಬಹಿರಂಗ ಸಭೆಯಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಕೊಳ್ಳೇಗಾಲ ಪಟ್ಟಣದ ನ್ಯಾಷನಲ್ ಮಿಡಲ್ ಸ್ಕೂಲ್ ಆವರಣದಲ್ಲಿ ಮಧ್ಯಾಹ್ನ 3 ಗಂಟೆಗೆ ಚಾಮ ರಾಜನಗರ ಹಳೇ ಖಾಸಗಿ ಬಸ್ ನಿಲ್ದಾಣ ದಲ್ಲಿ, ಸಂಜೆ 5 ಗಂಟೆಗೆ ಗುಂಡ್ಲುಪೇಟೆ ಪಟ್ಟಣದ ನೆಹರು ಪಾರ್ಕ್‍ನಲ್ಲಿ ಆಯೋ ಜಿಸಿರುವ ಸಾರ್ವಜನಿಕ ಬಹಿರಂಗ ಸಭೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.

Translate »