ಮೈಸೂರು, ಆ.28- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ (ಆಗಸ್ಟ್ 29) ಮೈಸೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿ ದ್ದಾರೆ. ಬೆಳಿಗ್ಗೆ 11.30ಕ್ಕೆ ಮೈಸೂರು ಲಲಿತ ಮಹಲ್ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಅಲ್ಲಿಂದ ಬೆಳಿಗ್ಗೆ 11.45ಕ್ಕೆ ಚಾಮುಂಡಿಬೆಟ್ಟಕ್ಕೆ ತೆರಳಿ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲಿದ್ದಾರೆ.
ಮತ್ತೆ ಮಧ್ಯಾಹ್ನ 12.30ಕ್ಕೆ ಮೈಸೂರು ಲಲಿತ ಮಹಲ್ ಹೆಲಿಪ್ಯಾಡ್‍ಗೆ ಆಗಮಿಸಿ ಹೆಲಿಕಾಪ್ಟರ್ ಮೂಲಕ ಕೆಆರ್.ಸಾಗರ ಹೆಲಿ ಪ್ಯಾಡ್‍ಗೆ ತೆರಳಲಿದ್ದಾರೆ. ಮಧ್ಯಾಹ್ನ 12.45ಕ್ಕೆ ಕೆಆರ್‍ಎಸ್‍ನಲ್ಲಿ ಕಾವೇರಿ ಮಾತೆಗೆ ಪೂಜೆ ಮತ್ತು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡುವರು. ನಂತರ ಮಧ್ಯಾಹ್ನ 12.15ಕ್ಕೆ ಕೆಆರ್‍ಎಸ್ ಹೆಲಿಪ್ಯಾಡ್‍ನಿಂದ ಕೊಡಗು ಜಿಲ್ಲೆಗೆ ತೆರಳಿ ಇತ್ತೀಚಿನ ಭಾರೀ ಮಳೆ ಹಾಗೂ ನೆರೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವುದರ ಜೊತೆಗೆ ಪರಿಹಾರ ಕೇಂದ್ರಗಳಿಗೂ ಭೇಟಿ ನೀಡುವರು. ನಂತರ ಕೊಡಗಿನ ಶಾಸ ಕರು, ಸಂಸದ ಹಾಗೂ ಅಧಿಕಾರಿಗಳೊಂ ದಿಗೆ ಸಭೆ ನಡೆಸುವರು. ಅಲ್ಲಿಂದ ಸಂಜೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.