ಸಿಎಂ ಪ್ರವಾಸ ಕಾರ್ಯಕ್ರಮ
ಮೈಸೂರು

ಸಿಎಂ ಪ್ರವಾಸ ಕಾರ್ಯಕ್ರಮ

August 10, 2018

ಮೈಸೂರು:  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಗಸ್ಟ್ 10 ರಿಂದ 12ರವರೆಗೆ ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 10ರಂದು ರಾತ್ರಿ 10 ಗಂಟೆಗೆ ರಸ್ತೆ ಮೂಲಕ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.

ಆ.11ರಂದು ಬೆಳಿಗ್ಗೆ 9 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬೆಳಿಗ್ಗೆ 11 ಗಂಟೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಸೀತಾಪುರ ಗ್ರಾಮದಲ್ಲಿ ಇಸ್ರೇಲ್ ಮಾದರಿ ಕೃಷಿಗೆ ರೈತರೊಂದಿಗೆ ಭತ್ತ ನಾಟಿ ಮಾಡುವ ಮೂಲಕ ಚಾಲನೆ ನೀಡಿ ಸಾರ್ವಜನಿಕ ಸಮಾ ರಂಭದಲ್ಲಿ ಭಾಗವಹಿಸಲಿ ದ್ದಾರೆ. ಮಧ್ಯಾಹ್ನ 1.30ಕ್ಕೆ ಕೆಆರ್‍ಎಸ್‍ಗೆ ಆಗಮಿಸಲಿದ್ದಾರೆ. ಸಂಜೆ 4.15ಕ್ಕೆ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಗ್ರಾಮಕ್ಕೆ ಆಗಮಿಸಲಿದ್ದಾರೆ. ರಾತ್ರಿ 7 ಗಂಟೆಗೆ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಿರುವ ಚುಂಚನಕಟ್ಟೆ ಜಲಪಾತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 9.30 ಗಂಟೆಗೆ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 12 ರಂದು ಬೆಳಿಗ್ಗೆ 8-30 ಗಂಟೆಗೆ ಮೈಸೂರು ವಿಮಾನ ನಿಲ್ದಾಣದಲ್ಲಿ ಅರಣ್ಯ ಇಲಾಖೆ ಮತ್ತು ಅಂಚೆ ಇಲಾಖೆ ವತಿಯಿಂದ ವಿಶ್ವ ಆನೆ ದಿನಾಚರಣೆ ಅಂಗವಾಗಿ ಹೊರತರುತ್ತಿರುವ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಿದ್ದಾರೆ. ಬೆಳಿಗ್ಗೆ 8-45 ಗಂಟೆಗೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಲಿದ್ದಾರೆ.

Translate »