ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ: ಎಚ್ಚರ ವಹಿಸಲು ಸಿಎಂ ತಾಕೀತು
ಮೈಸೂರು

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ: ಎಚ್ಚರ ವಹಿಸಲು ಸಿಎಂ ತಾಕೀತು

February 17, 2019

ಬೆಂಗಳೂರು: ಮುಂದಿನ ತಿಂಗಳಿನಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಲೋಪವಿಲ್ಲದೆ ನಡೆಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿಂದು ಸಾರ್ವ ಜನಿಕ ಶಿಕ್ಷಣ ಇಲಾಖೆ ಮತ್ತು ಗೃಹ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಅವರು, ಪೋಷಕರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆಯನ್ನು ಆಯೋಜಿಸಬೇಕು ಎಂದಿದ್ದಾರೆ.

ಪ್ರಶ್ನೆ ಪತ್ರಿಕೆ ಬಹಿರಂಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಹಿಂದಿನ ಪ್ರಕರಣಗಳಲ್ಲಿ ಭಾಗಿಯಾ ಗಿದ್ದ ಆರೋಪಿಗಳ ಮೇಲೆ ತೀವ್ರ ನಿಗಾ ಇರಿಸಬೇಕೆಂದು ತಾಕೀತು ಮಾಡಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾರ್ಚ್ 21ರಿಂದ ಹಾಗೂ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ ಆರಂಭವಾಗಲಿದ್ದು, ಎಸ್ಸೆಸ್ಸೆಲ್ಸಿಯಲ್ಲಿ 8.45 ಲಕ್ಷ ವಿದ್ಯಾರ್ಥಿಗಳು, ಪಿಯುಸಿಯಲ್ಲಿ 6.75 ಲಕ್ಷ ವಿದ್ಯಾರ್ಥಿಗಳು ಸೇರಿ ಒಟ್ಟು 15.5ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಹಿಂದಿನ ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿದ್ದು, ಮೌಲ್ಯಮಾಪನ ಸಂದರ್ಭದಲ್ಲೂ ಪ್ರತಿಭಟನೆಗಳಾಗಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದಕ್ಕೆ ಅವಕಾಶ ನೀಡದಂತೆ ಈ ಬಾರಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

Translate »