ಇಂದು 5 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ
ಮಂಡ್ಯ

ಇಂದು 5 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

February 27, 2019

ಮಂಡ್ಯ: ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ 5 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಫೆ.27 ರಂದು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.

ನಗರದ ಸರ್ಕಾರಿ ಬಾಲಕರ ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗಿರುವ ಕಾರ್ಯಕ್ರಮದ ಬೃಹತ್ ವೇದಿಕೆ ಸಿದ್ಧತೆಯನ್ನು ಪರಿಶೀಲಿಸಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಇತಿಹಾಸದಲ್ಲೇ ಅಭಿವೃದ್ಧಿ ವಿಚಾರ ದಲ್ಲಿ ನಾಳೆ ಸುದಿನ. ಕೃಷಿ, ರೇಷ್ಮೆ, ತೋಟ ಗಾರಿಕೆ, ನೀರಾವರಿ, ಮೀನುಗಾರಿಕಾ ಇಲಾಖೆ, ಪ್ರವಾಸೋದ್ಯಮ ಇಲಾಖೆಯಿಂದ ಫಲಾನುಭವಿಗಳಿಗೆ ಸವಲತ್ತು ವಿತರಿಸ ಲಾಗುವುದು. ಪ್ರತಿ ಇಲಾಖೆಯಲ್ಲೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು ಎಂದರು.

ಇದೇ ವೇಳೆ ಸಹಕಾರಿ ಇಲಾಖೆಯಿಂದ ಸಾವಿರಾರು ರೈತರಿಗೆ ಸಾಲ ಮನ್ನಾ ಋಣಮುಕ್ತ ಪತ್ರ ವಿತರಿಸಲಾಗುವುದು. ಹೆಸರಿಗಷ್ಟೇ 5 ಸಾವಿರ ಕೋಟಿ ಕಾರ್ಯ ಕ್ರಮ. ಇನ್ನೂ ಹೆಚ್ಚಿನ ಕಾರ್ಯಕ್ರಮಗಳಿಗೆ ನಾಳೆ ಸಿಎಂ ಚಾಲನೆ ನೀಡುತ್ತಾರೆ. ಕೃಷಿ, ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಯ ಬಜೆಟ್ ಮಂಡಿಸಿದ್ದರು. ಬಳಿಕ ಕಾಂಗ್ರೆಸ್ -ಜೆಡಿಎಸ್ ಮೈತ್ರಿಯಾಗಿದೆ. ಹೀಗಾಗಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ್ದೇ ಬಜೆಟ್ ಇದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ವಿಸಿ ನಾಲೆ ಆಧುನೀಕರಣ, ಕುಡಿಯುವ ನೀರಿನ ಕಾಮಗಾರಿ, ರಸ್ತೆಗಳ ಅಭಿವೃದ್ಧಿ, ಹೊಸ ಮೈಶುಗರ್ ಕಾರ್ಖಾನೆ ಆರಂಭ ಸೇರಿದಂತೆ ಇನ್ನಿತರ ಯೋಜನೆಗಳಿಗೆ ಮುಖ್ಯ ಮಂತ್ರಿಗಳು ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಡಿಸಿಎಂ ಪರಮೇಶ್ವರ್, ಸಚಿವರಾದ ಡಿ.ಕೆ.ಶಿವಕುಮಾರ್, ಜಿ.ಟಿ. ದೇವೇಗೌಡ, ಸಾ.ರಾ. ಮಹೇಶ್, ಪುಟ್ಟರಂಗಶೆಟ್ಟಿ ಸೇರಿದಂತೆ ಹಲವು ಸಚಿವರು ಪಾಲ್ಗೊಳ್ಳಲಿದ್ದು, 2 ಲಕ್ಷ ಜನರು ಸೇರುವ ನಿರೀಕ್ಷೆಯಿದೆ ಎಂದರು.

Translate »