ಇಂದು ಮೈಸೂರಿಗೆ ಸಿಎಂ ಯಡಿಯೂರಪ್ಪ
ಮೈಸೂರು

ಇಂದು ಮೈಸೂರಿಗೆ ಸಿಎಂ ಯಡಿಯೂರಪ್ಪ

October 7, 2019

ಮೈಸೂರು,ಅ.6-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅ.7 ರಿಂದ 9ರವರೆಗೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.7ರಂದು ಸಂಜೆ 6.30 ಗಂಟೆಗೆ ರಸ್ತೆ ಮೂಲಕ ಆಗಮಿಸಿ ಮೈಸೂರಿನಲ್ಲಿ ವಾಸ್ತವ್ಯ ಹೂಡುವರು.

ಅ.8ರಂದು ಬೆಳಿಗ್ಗೆ 9 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತೂರು ಮಠಕ್ಕೆ ಭೇಟಿ ನೀಡುವರು. ಮಧ್ಯಾಹ್ನ 1 ಗಂಟೆಗೆ ದಸರಾ ಪ್ರಯುಕ್ತ ಗಣ್ಯರ ಗೌರವಾರ್ಥ ಲಲಿತ ಮಹಲ್ ಹೋಟೆಲ್‍ನಲ್ಲಿ ಆಯೋ ಜಿಸಿರುವ ಭೋಜನಾಕೂಟದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.15ಕ್ಕೆ ಅರಮನೆ ಆವರಣದ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ ಪೂಜೆ ನೆರವೇರಿಸುವರು. ಸಂಜೆ 4.31ಕ್ಕೆ ವಿಜಯದಶಮಿ ಮೆರವಣಿಗೆ ಕಾರ್ಯಕ್ರಮ ಉದ್ಘಾಟಿಸುವರು. ರಾತ್ರಿ 7 ಗಂಟೆಗೆ ಬನ್ನಿಮಂಟಪ ಮೈದಾನ ದಲ್ಲಿ ಪಂಜಿನ ಕವಾಯತು ವೀಕ್ಷಣೆ ಮಾಡುವರು. ಬಳಿಕ ಮೈಸೂರಿನಲ್ಲೇ ವಾಸ್ತವ್ಯ ಹೂಡುವರು. ಅ.9ರಂದು ಬೆಳಿಗ್ಗೆ 8 ಗಂಟೆಗೆ ರಸ್ತೆ ಮೂಲಕ ಬೆಂಗಳೂರಿಗೆ ತೆರಳುವರು.

Translate »