ಅಮಿತ್ ಶಾ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ
ಮೈಸೂರು

ಅಮಿತ್ ಶಾ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ

September 23, 2019

ನವದೆಹಲಿ, ಸೆ.22- ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರ ಪುನರ್ವಸತಿ ಪರಿ ಹಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಪರಿಹಾರ ಕಾರ್ಯ ಆರಂಭಿಸಲು ಹಣ ಬಿಡುಗಡೆ ಮಾಡು ವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿಯ ನಾಯಕರು ಮನವಿ ಮಾಡಿದ್ದಾರೆ.

ದೆಹಲಿಯ ಕೃಷ್ಣ ಮೆನನ್ ಮಾರ್ಗದಲ್ಲಿ ರುವ ಅಮಿತ್ ಶಾ ನಿವಾಸದಲ್ಲಿ ಭೇಟಿ ಮಾಡಿ ಸುಮಾರು ಅರ್ಧ ಗಂಟೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮ ಗಳಿಗೆ ಪ್ರತಿಕ್ರಿಯೆ ನೀಡಿದರು. ಪ್ರವಾಹ ಪೀಡಿತರ ಪರಿಹಾರಕ್ಕೆ ಕೇಂದ್ರ ಸರ್ಕಾರ ಇದುವ ರೆಗೆ ಮೊದಲ ಕಂತಿನ ಹಣ ಬಿಡುಗಡೆ ಆಗಿಲ್ಲ, ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಕೂಡ ಹಣಕಾಸಿನ ತೊಂದರೆಯಿದೆ. ಹೀಗಾಗಿ ಶೀಘ್ರವೇ 2 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಮನವಿ ಮಾಡಿದೆವು. ಪ್ರಧಾನಿ ಮೋದಿಯವರು ಅಮೆರಿಕಾ ಪ್ರವಾಸದಿಂದ ಬಂದ ಬಳಿಕ ಇನ್ನೆರಡು ಮೂರು ದಿನಗಳಲ್ಲಿ ಚರ್ಚೆ ನಡೆಸಿ ಹಣ ಬಿಡು ಗಡೆ ಮಾಡುವ ಭರವಸೆಯನ್ನು ಅಮಿತ್ ಶಾ ನೀಡಿದ್ದಾರೆ ಎಂದರು. ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯ ಸ್ಥಿತಿಗತಿಗಳನ್ನು ಅಮಿತ್ ಶಾ ಅವರೇ ಖುದ್ದು ಬಂದು ಪರಿಶೀಲಿಸಿ ನೋಡಿದ್ದಾರೆ. ಪ್ರವಾಹ ಸ್ಥಳಗಳಿಗೆ ಹಣ ಬಿಡುಗಡೆ ಮಾಡಲು ಉಪ ಚುನಾವಣೆಯ ನೀತಿ ಸಂಹಿತೆ ಅಡಿಯಾಗಲ್ಲ. ಪ್ರಧಾನಿ ಬಂದ ಬಳಿಕ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತದೆ ಎಂಬ ವಿಶ್ವಾಸವಿದೆ ಎಂದರು.

ಪರಿಹಾರ ಬಿಡುಗಡೆಗೆ ಯಾಕಿಷ್ಟು ವಿಳಂಬವಾಗುತ್ತಿದೆ ಎಂದಾಗ, ಮುಂಬರುವ ಚುನಾವಣೆ ನಡೆಯಲಿರುವ ಮಹಾರಾಷ್ಟ್ರ ಸೇರಿದಂತೆ ಪ್ರವಾಹಪೀಡಿತ ಯಾವ ರಾಜ್ಯಕ್ಕೂ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ, ಅಲ್ಲಿನ ತಂಡ ಬಂದು ಪರಿಶೀಲಿಸಿ ವರದಿ ಸಲ್ಲಿಸಿ ಇನ್ನೆರಡು ಮೂರು ದಿನಗಳಲ್ಲಿ ಬಿಡುಗಡೆ ಮಾಡಲಿದೆ ಎಂದರು. ರಾಜ್ಯದಲ್ಲಿ ಉಂಟಾಗಿ ರುವ ನೆರೆ ಪರಿಸ್ಥಿತಿ ನಿಭಾಯಿಸಲು ಕೂಡಲೇ ಅನುದಾನ ಬಿಡುಗಡೆ ಮಾಡಲು ಮನವಿ ಮಾಡಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಾಗಿ ಒಂದು ತಿಂಗಳು ಕಳೆದರೂ ಪರಿಹಾರ ನೀಡಿಲ್ಲ. ಆದಷ್ಟು ಶೀಘ್ರ ಹಣಕಾಸಿನ ನೆರವು ಬಿಡುಗಡೆ ಮಾಡಲು ಕೋರಲಾಗಿದೆ. ಎರಡು ದಿನಗಳಲ್ಲಿ ಕೇಂದ್ರದ ನೆರವು ಸಿಗಲಿದೆ. ನೆರೆ ಪರಿಹಾರ ಬಿಡುಗಡೆಗೆ ನೀತಿ ಸಂಹಿತೆ ಅಡ್ಡಿಯಾಗಲ್ಲ. ಅನರ್ಹ ಶಾಸಕರ ಬಗ್ಗೆ ಅಮಿತ್ ಷಾ ಜತೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟನೆ ನೀಡಿದರು. ರಾಜ್ಯದ ಪ್ರವಾಹ ಪರಿಸ್ಥಿತಿಗೆ ಕೇಂದ್ರದಿಂದ ಅನುದಾನ ಪಡೆಯುವ ಅಗತ್ಯವಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ನೀಡಿದ್ದ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ, ಅವರು ಆ ರೀತಿ ಹೇಳಿಕೆ ನೀಡಬಾರದು, ನಾನು ಈ ಬಗ್ಗೆ ಅವರ ಜೊತೆ ಮಾತನಾಡುತ್ತೇನೆ ಎಂದರು.

Translate »