ಬ್ರಿಟನ್ ಕನ್ನಡಿಗರೊಂದಿಗೆ ಸಿಎಂ ಯಡಿಯೂರಪ್ಪ ವಿಡಿಯೋ ಸಂವಾದ
ಮೈಸೂರು

ಬ್ರಿಟನ್ ಕನ್ನಡಿಗರೊಂದಿಗೆ ಸಿಎಂ ಯಡಿಯೂರಪ್ಪ ವಿಡಿಯೋ ಸಂವಾದ

April 27, 2020

ಬೆಂಗಳೂರು,ಏ.26-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಇಂಗ್ಲೆಂಡ್‍ನಲ್ಲಿರುವ ಕನ್ನಡ ಬಳಗದವರೊಂದಿಗೆ ವಿಡಿಯೋ ಸಂವಾದ ನಡೆಸಿ ಯೋಗಕ್ಷೇಮ ವಿಚಾರಿಸಿದರು.

ಯುಕೆ ಕಾನೂನು ಸಚಿವ ರಾಬರ್ಟ್ ಬಕ್ಲಂಡ್, ಬ್ರಿಟನ್‍ನಲ್ಲಿ ಕೊರೊನಾ ಹರಡು ತ್ತಿರುವ ಹಾಗೂ ನಿಯಂತ್ರಣ ಕ್ರಮಗಳ ಕುರಿತು ಮಾಹಿತಿ ನೀಡಿದರು. ಅಷ್ಟೇ ಅಲ್ಲದೆ ಕರ್ನಾ ಟಕದಲ್ಲಿ ಕೊರೊನಾ ನಿಗ್ರಹ ಮಾಡುವಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಕನ್ನಡಿಗ ಶರವಣ ಗುರುಮೂರ್ತಿ ಮಾತನಾಡಿ, ಇಲ್ಲಿ ಅಧ್ಯಯನ ಮಾಡುತ್ತಿರುವ ಹಲವು ಕನ್ನಡಿಗ ವಿದ್ಯಾರ್ಥಿಗಳು ಸಾಲ ಮಾಡಿ ಇಲ್ಲಿಗೆ ಬಂದಿದ್ದಾರೆ. ಇದೀಗ ಇವರೆ ಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಬ್ಯಾಂಕ್‍ನವರ ಜೊತೆ ಮಾತನಾಡಿ, ಇಎಂಐ ಕಟ್ಟಲು ಸಮಯವಕಾಶ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಲಾರ್ಡ್ ಚಾನ್ಸಲರ್ ಮತ್ತು ಸೆಕ್ರೆಟರಿ ಆಫ್ ಫಾರ್ ಜಸ್ಟೀಸ್, ಮೆಂಬರ್ ಆಫ್ ಪಾರ್ಲಿಮೆಂಟ್ ರಾಬರ್ಟ್ ಬಕ್ಲಂಡ್ ಹಾಗೂ ಸುರೇಶ್ ಗತ್ತಾಪುರ, ಕೌನ್ಸಿಲರ್ ವೆಸ್ಟ್ ಸ್ವಿಂಡನ್ ಟ್ರಸ್ಟಿ ಆಫ್ ಹಿಂದೂ ಟೆಂಪಲ್ ಹಾಗೂ ಶರವಣ ಗುರುಮೂರ್ತಿ ಸೇರಿದಂತೆ ಹಲವು ಯುಕೆ ಕನ್ನಡ ಬಳಗದ ಸದಸ್ಯರು ಭಾಗವಹಿ ಸಿದ್ದರು. ಕನ್ನಡ ಬಳಗದ ಸದಸ್ಯರ ಜೊತೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಲಂಡನ್ ಕಾನೂನು ಮಂತ್ರಿ ರಾಬರ್ಟ್ ಬಕ್ಲಂಡ್, ಕೊರೊನ ಹರಡುತ್ತಿರುವ ಬಗ್ಗೆ ಹಾಗೂ ಯಾವ ರೀತಿ ಅದನ್ನು ನಿಭಾಯಿಸುತ್ತಿದ್ದೇವೆ ಎನ್ನುವುದನ್ನು ವಿವರಿಸಿದರು. ಅಷ್ಟೇ ಅಲ್ಲದೆ ಕರ್ನಾಟಕದಲ್ಲಿ ಕೊರೊನ ನಿಗ್ರಹ ಮಾಡುವಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶರವಣ ಗುರುಮೂರ್ತಿ, ಲಂಡನ್‍ನಲ್ಲಿ ಓದುತ್ತಿರುವ ಹಲವು ಕನ್ನಡಿಗ ವಿದ್ಯಾರ್ಥಿಗಳು ಸಾಲ ತೆಗೆದುಕೊಂಡು ಇಲ್ಲಿಗೆ ಬಂದಿದ್ದು ಇದೀಗ ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬ್ಯಾಂಕ್ ಅಧಿಕಾರಿಗಳ ಜೊತೆ ಮಾತನಾಡಿ ಇಎಂಐ ಕಟ್ಟಲು ಸಮಯಾವಕಾಶ ಕೊಡಿಸುವುದಾಗಿ ಭರವಸೆ ನೀಡಿದರು.

Translate »