ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯ ಸಹಕಾರ
ಚಾಮರಾಜನಗರ

ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯ ಸಹಕಾರ

February 12, 2019

ಅರಸೀಕೆರೆ: ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನಿಚಾಮರಾಜನಗರ, ಫೆ. 11- ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಇದೇ ಫೆ.17ರಿಂದ ಜರುಗುವ ಮೂರು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾಡಳಿತ ದಿಂದ ಅಗತ್ಯ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ತಿಳಿಸಿದರು.
ತಮ್ಮ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರತಿನಿಧಿಗಳು, ಕನ್ನಡ ಸಂಘಟನೆ ಗಳ ಮುಖಂಡರು, ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಜಿಲ್ಲಾಡಳಿತದಿಂದ ಅವಶ್ಯವಿರುವ ನೆರವು ನೀಡಲಾಗುತ್ತದೆ. ಮೂರು ದಿನಗಳ ಕಾಲ ನಗರದ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಇನ್ನಿತರ ಸಿದ್ಧತೆಗೆ ನಗರಸಭೆ ಅಧಿಕಾರಿಗಳು ಸಹಕರಿಸಬೇಕೆಂದು ನಿರ್ದೇಶನ ನೀಡಿದರು.

ಮೂರು ದಿನಗಳ ಕಾಲವು ವಿದ್ಯುತ್ ಸರಬರಾಜಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ನಿಯೋಜಿಸಬೇಕು. ಇನ್ನಿತರ ಬಂದೋಬಸ್ತ್ ವ್ಯವಸ್ಥೆಗಳಿಗೆ ಕ್ರಮ ತೆಗೆದು ಕೊಳ್ಳುವಂತೆ ಆಯಾ ಇಲಾಖೆಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಸಾಹಿತ್ಯ ಸಮ್ಮೇಳನದ ಅಂಗವಾಗಿ ಆಯೋಜಿಸಲಾಗುವ ಪುಸ್ತಕ ಪ್ರದರ್ಶನ, ಮಾರಾಟ ಮೇಳಕ್ಕೆ ಅಗತ್ಯವಿರುವ ಸ್ಥಳಾವಕಾಶವನ್ನು ನೀಡಬೇಕು. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬೇಡಿಕೆಗೆ ಅನುಸಾರವಾಗಿ ಪುಸ್ತಕ ಮೇಳಕ್ಕೆ ಸ್ಥಳ ಗುರುತಿಸಿ ನೀಡುವ ಪ್ರಕ್ರಿಯೆ ಕೈಗೊಳ್ಳಬೇಕೆಂದರು.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತ್ಯ ಆಸಕ್ತರು ಅಭಿಮಾನಿಗಳು, ಜಿಲ್ಲಾ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಪೂರಕ ವ್ಯವಸ್ಥೆಗಳನ್ನು ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಕೈಜೋಡಿಸಲು ಜಿಲ್ಲೆಯ ಅಧಿಕಾರಿಗಳು ಸಹ ಮುಂದಾಗುವಂತೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಬಿ.ಎಸ್. ವಿನಯ್ ಮಾತನಾಡಿ, ಜಿಲ್ಲಾಡಳಿತ ಭವನದ ಆವರಣ ದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಕಾರ್ಯ ಕ್ರಮ ಆಯೋಜನೆಗೆ ಅನುವು ಮಾಡಿಕೊಡಬೇಕು. ಮೆರವಣಿಗೆ, ಉದ್ಘಾಟನೆ, ವಿವಿಧ ಗೋಷ್ಠಿಗಳು ಆಯೋಜಿಸಲಾಗಿದೆ. ಮೂರು ದಿನಗಳ ಕಾಲವು ಸಮ್ಮೇಳನ ಸುಸೂತ್ರವಾಗಿ ನಡೆಯಲು ಸಂಪೂರ್ಣ ಸಹಕಾರ ಬಯಸುವುದಾಗಿ ನುಡಿದರು. ತಹಶೀಲ್ದಾರ್ ಕೆ.ಪುರಂದರ್, ನಗರಸಭೆ ಆಯುಕ್ತ ರಾಜಣ್ಣ, ಮುಖಂಡ ರಾದ ಚಾ.ರಂ.ಶ್ರೀನಿವಾಸ ಗೌಡ, ಗು. ಪುರುಷೋತ್ತಮ್, ಮಾದಪುರ ರವಿ, ಬಸವರಾಜು, ಪರಿಷತ್ ಪದಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

Translate »