ಸೆ. 25ರೊಳಗೆ ವಾರ್ಷಿಕ ಮಹಾಸಭೆ ನಡೆಸಲು ಸಹಕಾರ ಸಂಘಗಳಿಗೆ ಸೂಚನೆ
ಚಾಮರಾಜನಗರ

ಸೆ. 25ರೊಳಗೆ ವಾರ್ಷಿಕ ಮಹಾಸಭೆ ನಡೆಸಲು ಸಹಕಾರ ಸಂಘಗಳಿಗೆ ಸೂಚನೆ

September 19, 2018

ಚಾಮರಾಜನಗರ: ಚಾಮರಾಜನಗರ ಉಪವಿಭಾಗದಲ್ಲಿ ಕಾರ್ಯನಿರ್ವಹಿ ಸುತ್ತಿರುವ ಎಲ್ಲ ಸಹಕಾರ ಸಂಘಗಳು, ಬ್ಯಾಂಕುಗಳು 2017-18ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಸೆಪ್ಟೆಂಬರ್ 25ರೊಳಗೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಹಕಾರ ಇಲಾಖೆ ಸೂಚಿಸಿದೆ.

ಸಹಕಾರ ಸಂಘಗಳ ಕಾಯಿದೆಗೆ ತಿದ್ದುಪಡಿ ತಂದಿದ್ದು, ಸಹಕಾರ ಸಂಘಗಳ ಸದಸ್ಯರು ಸಂಘದ ಐದು ವಾರ್ಷಿಕ ಮಹಾಸಭೆಗಳ ಪೈಕಿ 3 ವಾರ್ಷಿಕ ಮಹಾಸಭೆಗೆ ಗೈರುಹಾಜರಾ ದರೆ ಹಾಗೂ ಸತತವಾಗಿ 3 ವರ್ಷಗಳ ಅವಧಿಗೆ ಸಂಘದಿಂದ ನೀಡುವ ಕನಿಷ್ಟ ಸೌಲಭ್ಯ ಗಳನ್ನು ಪಡೆಯದ ಸದಸ್ಯರಿಗೆ ಸಂಘದ ಆಡಳಿತ ಮಂಡಳಿಗೆ ನಡೆಯುವ ಚುನಾವಣೆ ಯಲ್ಲಿ ಸ್ಪರ್ಧಿಸುವ ಮತ್ತು ಮತದಾನ ಮಾಡುವ ಹಕ್ಕು ಇರುವುದಿಲ್ಲ.

ಸಹಕಾರ ಸಂಘಗಳ ಸದಸ್ಯರು ಹೆಚ್ಚು ಸಂಖ್ಯೆಯಲ್ಲಿ ಸಂಘದ ವಾರ್ಷಿಕ ಮಹಾ ಸಭೆಯಲ್ಲಿ ಭಾಗವಹಿಸಬೇಕು. ಸಂಘದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಕರ್ನಾಟಕ ಸಹಕಾರ ಸಂಘಗಳ ಕಾಯಿದೆ 1959ರ ಕಲಂ 27(1) ಅನ್ವಯ ಎಲ್ಲ ಸಹಕಾರ ಸಂಘಗಳು, ಬ್ಯಾಂಕುಗಳು 2017-18ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಸೆಪ್ಟೆಂಬರ್ 25ರೊಳಗೆ ಕಡ್ಡಾಯವಾಗಿ ನಡೆಸಬೇಕೆಂದು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಚ್.ಎನ್. ರಮೇಶ್ ತಿಳಿಸಿದ್ದಾರÉ.

Translate »