ನಾಳೆ ಎಲ್‍ಐಸಿ ಪ್ರತಿನಿಧಿಗಳ ಒಕ್ಕೂಟದ ಸಮ್ಮೇಳನ
ಮೈಸೂರು

ನಾಳೆ ಎಲ್‍ಐಸಿ ಪ್ರತಿನಿಧಿಗಳ ಒಕ್ಕೂಟದ ಸಮ್ಮೇಳನ

August 10, 2018

ಮೈಸೂರು: ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಒಕ್ಕೂಟದ 5ನೇ ಮಹಾ ಸಮ್ಮೇಳನ ಆ.11ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಸಾ.ರಾ. ಸಭಾಂಗಣದಲ್ಲಿ ನಡೆಯಲಿದೆ. ಸಮ್ಮೇಳನವನ್ನು ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಎಸ್.ಬಿ.ಶ್ರೀನಿವಾಸಚಾರಿ ಉದ್ಘಾಟಿಸಲಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಮೇಯರ್ ಭಾಗ್ಯವತಿ, ಎಲ್‍ಐಸಿ ವಲಯ ಪ್ರಬಂಧಕ ಟಿ.ಸಿ.ಸುನೀಲ್ ಕುಮಾರ್, ಮೈಸೂರು ವಿಭಾಗಾಧಿಕಾರಿ ಕೆ.ಅನಂತ ಪದ್ಮನಾಭ, ಸಂಸದರಾದ ಪ್ರತಾಪ್ ಸಿಂಹ, ಆರ್.ಧ್ರುವನಾರಾಯಣ ಭಾಗವಹಿಸಲಿದ್ದಾರೆ.

Translate »