ಸಮ್ಮಿಶ್ರ ಸರ್ಕಾರ ದಿವಾಳಿಯಾಗಿದ್ದು, ಅಭಿವೃದ್ಧಿ ಕುಂಠಿತಗೊಂಡಿವೆ ಬಿಜೆಪಿ ಮುಖಂಡ ಆರ್.ಅಶೋಕ್ ಟೀಕೆ
ಮೈಸೂರು

ಸಮ್ಮಿಶ್ರ ಸರ್ಕಾರ ದಿವಾಳಿಯಾಗಿದ್ದು, ಅಭಿವೃದ್ಧಿ ಕುಂಠಿತಗೊಂಡಿವೆ ಬಿಜೆಪಿ ಮುಖಂಡ ಆರ್.ಅಶೋಕ್ ಟೀಕೆ

October 24, 2018

ಕೆ.ಆರ್.ನಗರ:  ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದೇ ವೇದಿಕೆಗೆ ಬಂದರೆಂದರೆ ಯಾರನ್ನೂ ನಂಬಲು ಸಾಧ್ಯವಿಲ್ಲ. ಈ ಸರ್ಕಾರಕ್ಕೆ ಭದ್ರತೆ ಎಲ್ಲಿದೆ? ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಆರ್.ಅಶೋಕ್ ಟೀಕಿಸಿದರು.

ಪಟ್ಟಣದ ಮಂಜುನಾಥ ಕಲ್ಯಾಣ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ದಿವಾಳಿಯಾಗಿದ್ದು, ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. 38 ಸ್ಥಾನಗಳನ್ನು ಗಳಿಸಿರುವ ಜೆಡಿಎಸ್ ಆಡಳಿತ ನಡೆಸುತ್ತಿದ್ದರೆ, 78 ಸ್ಥಾನಗಳನ್ನು ಪಡೆದಿರುವ ಕಾಂಗ್ರೆಸ್ ಪಕ್ಷದ ಮುಖಂಡರು ಅಧಿಕಾರ ಕ್ಕಾಗಿ ಕಿತ್ತಾಟ ನಡೆಸುತ್ತಲೇ ಇದ್ದಾರೆ. ಇದರಿಂದ ಬೇಸತ್ತಿರುವ ಜನತೆ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಗಳನ್ನು ಗೆಲ್ಲಿಸಲಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ನಡೆಯುತ್ತಿರುವ 5 ಉಪ ಚುನಾವಣೆಗಳಲ್ಲಿಯೂ ಸಹ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಜನತೆ ಅತ್ಯಧಿಕ ಮತ ಗಳಿಂದ ಗೆಲ್ಲಿಸುವುದರ ಮೂಲಕ ಮುಂದೆ ನಡೆಯುವ ಲೋಕಸಭಾ ಚುನಾವಣೆ ಯಲ್ಲಿಯೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲು ಮುನ್ಸೂಚನೆಯಾಗಲಿದೆ ಎಂದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಆರ್. ಅಶೋಕ್, ಮೈಸೂರು ಭಾಗದ ಉಸ್ತುವಾರಿ ವಹಿಸಿಕೊಂಡಿದ್ದರೂ ಕಳೆದ ಚುನಾವಣೆಗಳಲ್ಲಿ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ 3 ಪಕ್ಷಗಳು ಇದ್ದುದ್ದರಿಂದ ನಮಗೆ ಹಿನ್ನೆಡೆ ಯಾಯಿತು. ಆದರೆ ಈಗ ನಮ್ಮ ಎದುರಾಳಿ ಕಾಂಗ್ರೆಸ್ ಒಳ ಜಗಳ ದಿಂದ ಆ ಪಕ್ಷದ ಅಭ್ಯರ್ಥಿ ಕಣದಲ್ಲಿ ಇಲ್ಲದಿರುವುದರಿಂದ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಸುಲಭವಾಗಿ ಗೆಲುವು ಸಾಧಿಸಲು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಹಿಂದೆ ಕಾಂಗ್ರೆಸ್‍ನ 7 ಶಾಸಕರಿದ್ದರೂ ಪಕ್ಷೇತರ ಅಭ್ಯರ್ಥಿಯಾಗಿದ್ದ ಮಾಜಿ ಮುಖ್ಯ ಮಂತ್ರಿ ಎಸ್.ಎಂ.ಕೃಷ್ಣ ಮತ್ತು ಶಂಕರೇಗೌಡ ಜಯಶೀಲರಾಗಿರುವುದು ಈ ಕ್ಷೇತ್ರದಲ್ಲಿ ಮತ್ತೊಂದು ಬಾರಿ ಜೆಡಿಎಸ್ ಭದ್ರಕೋಟೆಯನ್ನು ಬೇಧಿಸಿ, ಗೆಲ್ಲಲು ಅನುಕೂಲವಾಗಲಿದೆ. ನಮ್ಮ ಪಕ್ಷದ ಅಭ್ಯರ್ಥಿ ಡಾ. ಸಿದ್ದರಾಮಯ್ಯ ಸರಳ ಸಜ್ಜನಿಕೆಯ ಪ್ರಾಮಾಣಿಕ ಅಭ್ಯರ್ಥಿಯಾಗಿರುವುದರಿಂದ ಜತೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿ ಶಿವ ರಾಮೇಗೌಡ ಅವರಿಗೆ ತತ್ವ ಸಿದ್ಧಾಂತವಿಲ್ಲ. ಮೂರು ಪಕ್ಷಗಳನ್ನು ಸುತ್ತಾಡಿರುವ ಅವರಿಗೆ ಈ ಭಾಗದಲ್ಲಿ ಜನರ ಒಲವು ಇಲ್ಲ ಎಂದು ವ್ಯಂಗ್ಯವಾಡಿದರು.

ಇತ್ತೀಚೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾವು ಮುಂಗುಸಿಗಳಂತೆ ಒಬ್ಬರ ಮುಖವನ್ನು ಒಬ್ಬರು ನೋಡಿ ಕೊಳ್ಳದೆ. ಒಲ್ಲದ ಮನಸ್ಸಿನಿಂದ ಇರುವು ದನ್ನು ಗಮನಿಸಿದರೆ, ಅವರ ನಡುವೆ ಭಿನ್ನಾಭಿಪ್ರಾಯ ಇರುವುದನ್ನು ತಿಳಿಯ ಬಹುದು. ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಈ ಹಿಂದೆ ಧರ್ಮಸ್ಥಳದಲ್ಲಿ ಅವರ ಕಾರ್ಯಕರ್ತರ ಸಮ್ಮುಖದಲ್ಲಿ ಲೋಕಸಭಾ ಚುನಾವಣೆಗೆ ಮುನ್ನ ಈ ಸಮ್ಮಿಶ್ರ ಸರ್ಕಾರ ಬೀಳುತ್ತದೆ ಎಂಬ ಹೇಳಿಕೆ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗಿರುವುದು ಇದಕ್ಕೆ ಉದಾಹರಣೆಯಾಗಿದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಶಿವಣ್ಣ, ತಾಲೂಕು ಅಧ್ಯಕ್ಷ ಹೊಸ ಹಳ್ಳಿ ವೆಂಕಟೇಶ್, ಜಿಲ್ಲಾ ಉಪಾಧ್ಯಕ್ಷ ಮಿರ್ಲೆ ಶ್ರೀನಿವಾಸ್‍ಗೌಡ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಹೇಮಂತ್‍ಕುಮಾರ್, ವಕ್ತಾರ ಹೆಚ್.ಪಿ.ಗೋಪಾಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರೀಕ್ಷಿತ್ ಅರಸ್, ಪ್ರಭಾಕರ್ ಜೈನ್, ಶಶಿಧರ್‍ಮೂರ್ತಿ, ಅನಿಲ್‍ಕುಮಾರ್, ಅರಕೆರೆ ತೇಜಸ್, ಎಲೆ ಮುದ್ದನಹಳ್ಳಿ ಆನಂದ್, ಬಾಲು ಮನೋ ಹರ್, ಮಾಬಳ್ಳಿಮೂರ್ತಿ, ಬಾಲು, ಗೋಪಾಲ್ ರಾವ್ ಮತ್ತಿತರರು ಹಾಜರಿದ್ದರು.

Translate »