ನೀತಿ ಸಂಹಿತೆ ಉಲ್ಲಂಘನೆ: ನಿಖಿಲ್, ಸುಮಲತಾ ವಿರುದ್ಧ ಎಫ್‍ಐಆರ್ ದಾಖಲು
ಮೈಸೂರು

ನೀತಿ ಸಂಹಿತೆ ಉಲ್ಲಂಘನೆ: ನಿಖಿಲ್, ಸುಮಲತಾ ವಿರುದ್ಧ ಎಫ್‍ಐಆರ್ ದಾಖಲು

April 11, 2019

ಮಂಡ್ಯ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಆರೋಪದ ಮೇಲೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ ಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ಪ್ರತ್ಯೇಕ ಪ್ರಕರಣದಲ್ಲಿ ಎಫ್‍ಐಆರ್ ದಾಖ ಲಾಗಿದೆ. ನಾಗಮಂಗಲ ತಾಲೂಕಿನ ಬೆಳ್ಳೂರು ಬಳಿ ತೆಂಗಿನತೋಟದಲ್ಲಿ ಕಾರ್ಯಕರ್ತರಿಗೆ ಊಟ ಹಂಚಿದ ಆರೋಪದ ಮೇಲೆ,ಅಭ್ಯರ್ಥಿ ನಿಖಿಲ್ ಮತ್ತು ಬೆಂಬಲಿಗ ಕನಘಟ್ಟ ಶ್ರೀನಿವಾಸ್ ವಿರುದ್ದ ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,ಹಾಗೆಯೇ ನಾಗಮಂಗಲ ವ್ಯಾಪ್ತಿಯಲ್ಲಿ ಅನುಮತಿ ಪಡೆದದ್ದಕ್ಕಿಂತ ಹೆಚ್ಚು ಸಮಯ ಪ್ರಚಾರ ನಡೆಸಿದ ಆರೋಪದ ಮೇಲೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಬೆಂಬಲಿಗೆ ರವಿಕಾಂತ ಎಂಬುವವರ ವಿರುದ್ಧ ನಾಗಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ನಡೆದ ಪ್ರಚಾರದ ವೇಳೆ ಮೈತ್ರಿ ಅಭ್ಯರ್ಥಿ ನಿಖಿಲ್ ಮತ್ತು ಬೆಂಬಲಿಗ ಶ್ರೀನಿವಾಸ್ ಅವರು ಚುನಾವಣಾ ಪ್ರಚಾರದ ವೇಳೆ ಅನುಮತಿ ಪಡೆಯದೇ ಬೆಳ್ಳೂರು ಬಳಿ ತೆಂಗಿನ ತೋಟದಲ್ಲಿ ಊಟ ಹಂಚಿದ್ದರು,ಈ ವೇಳೆ ದಾಳಿ ನಡೆಸಿದ ಪೊಲೀಸರು ಮತ್ತು ಚುನಾವಣಾ ಕಣ್ಗಾವಲು ಅಧಿಕಾರಿಗಳು ಊಟದ ಪಾತ್ರೆಗಳನ್ನು ವಶಪಡಿಸಿ ಕೊಂಡಿದ್ದರು. ನೀತಿ ಸಂಹಿತೆ ಉಲ್ಲಂಘನೆ ಆರೋ ಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.ಈಗಾಗಲೆ ನಿಖಿಲ್ ವಿರುದ್ದ 16 ಪ್ರಕರಣ ದಾಖಲಾಗಿದ್ದವು ಇದೀಗ ನೆನ್ನೆ ನಡೆದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವೂ ಸೇರಿ ಒಟ್ಟು 17 ಪ್ರಕರ ದಾಖಲಾದಂತಾಗಿದೆ. ಮತ್ತೊಂದು ಪ್ರಕರಣದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ನಾಗಮಂಗಲದ ರವಿಕಾಂತ್ ವಿರುದ್ಧ ವಿರುದ್ದವೂ ತಡವಾಗಿ ಚುನಾವಣಾ ಪ್ರಚಾರ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ನಾಗಮಂಗಲ ವ್ಯಾಪ್ತಿಯಲ್ಲಿ ನಿನ್ನೆ ಬೆಳಿಗ್ಗೆ 8:30ಕ್ಕೆ ನಡೆಯ ಬೇಕಿದ್ದ  ಸುಮಲತಾ ಪ್ರಚಾರ, ತಡವಾಗಿ 11:30 ಕ್ಕೆ ಆರಂಭವಾಗಿತ್ತು. ಇದು ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ನಾಗಮಂಗಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಚುನಾವಣಾ ಪ್ರಚಾರಕ್ಕೆ ಹಣದ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ಜಿ.ಮಾದೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಾ.ಜಿ. ಮಾದೇಗೌಡ ಅವರು ಮೈತ್ರಿ ಅಭ್ಯರ್ಥಿ ನಿಖಿಲ್ ಪರ ಚುನಾವಣೆ ಪ್ರಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಬಳಿ ಹಣದ ಬೇಡಿಕೆ ಇಟ್ಟ ಆಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಆಡಿಯೋ  ಸಂಬಂಧ ಚುನಾವಣಾಧಿಕಾರಿ ಜಗದೀಶ್ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್171(ಇ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

Translate »