ಸ್ವಚ್ಛ ಸರ್ವೇಕ್ಷಣೆಗೆ ಸಹಕರಿಸಿ
ಮೈಸೂರು

ಸ್ವಚ್ಛ ಸರ್ವೇಕ್ಷಣೆಗೆ ಸಹಕರಿಸಿ

January 8, 2019

ಮೈಸೂರು: ಸ್ವಚ್ಛ ಸರ್ವೇ ಕ್ಷಣೆಯಲ್ಲಿ ಪಾಲ್ಗೊಂಡು ಮತ್ತೆ ಮೈಸೂರು ಸ್ವಚ್ಛ ನಗರಿ ಎಂಬ ಬಿರುದು ಪಡೆಯಲು ಸಹಕರಿಸುವಂತೆ ರಾಜಮಾತೆ ಪ್ರಮೋ ದಾದೇವಿ ಒಡೆಯರ್, ಮೈಸೂರು ನಾಗರಿಕರಿಗೆ ಕರೆ ನೀಡಿದ್ದಾರೆ.

ಮೇಯರ್ ಪುಷ್ಪಲತಾ ಜಗನ್ನಾಥ್ ಅವರು ಅರಮನೆಗೆ ತೆರಳಿ ರಾಜಮಾತೆ ಪ್ರಮೋದಾದೇವಿ ಅವರನ್ನು ಭೇಟಿ ಮಾಡಿ ಸ್ವಚ್ಛ ನಗರ ಅಭಿಯಾನದ ಬ್ರಾಂಡ್ ಅಂಬಾಸಡರ್ ಆಗಿರುವವರನ್ನು ಸನ್ಮಾ ನಿಸಿ ಸ್ವಚ್ಛ ಸರ್ವೇಕ್ಷಣದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭ ಪ್ರತಿಕ್ರಿಯಿಸಿದ ಪ್ರಮೋ ದಾದೇವಿ ಒಡೆಯರ್, ಈವರೆಗೂ ಸ್ವಚ್ಛತೆ ಕಾಪಾಡಿಕೊಂಡು ಬಂದಿರುವ ಮೈಸೂರಿ ಗರು, ಮುಂದೆಯೂ ಅದೇ ಸ್ಥಾನದಲ್ಲಿ ಮುಂದುವರೆಯಲು ಸಹಕರಿಸಬೇಕೆಂದು ಕರೆ ನೀಡಿದರು. ಸ್ವಚ್ಛ ಭಾರತ ಆ್ಯಪ್ ಅನ್ನು ಡೌನ್ ಲೋಡ್ ಮಾಡಿಕೊಂಡು ಮಾಹಿತಿ ನೀಡುವ ಮೂಲಕ ಸಾರ್ವಜ ನಿಕರು ಈ ಬಾರಿ ಮೈಸೂರು ಸ್ವಚ್ಛತೆಯಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಬೇಕು ಎಂದ ಅವರು, ತಾನೂ ಕಾರ್ಯಕ್ರಮಗಳಲ್ಲಿ ಸಂತೋಷದಿಂದ ಪಾಲ್ಗೊಳ್ಳುತ್ತೇನೆ ಎಂದರು.
ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸಿ ಕೊಳ್ಳಲು ಪಾಲಿಕೆ ಪ್ರಯತ್ನಿಸಬೇಕು, ಪಾರಂಪರಿಕ ನಗರಿ ಎಂಬ ಹೆಸರಿರುವ ಮೈಸೂರಲ್ಲಿ ಹೆರಿಟೇಜ್ ಬಿಲ್ಡಿಂಗ್‍ಗಳಿ ಲ್ಲದಿದ್ದರೆ ಹೇಗೆ ಎಂದ ಅವರು, ಲ್ಯಾನ್ಸ್ ಡೌನ್ ಬಿಲ್ಡಿಂಗ್ ಮತ್ತು ದೇವರಾಜ ಮಾರು ಕಟ್ಟೆ ಕಟ್ಟಡಗಳನ್ನು ಸಂರಕ್ಷಿಸಲು ಪಾಲಿಕೆ, ಜಿಲ್ಲಾಡಳಿತ, ಜನಪ್ರತಿನಿಧಿಗಳು ಮುಂದಾಗ ಬೇಕು ಎಂದು ಸಲಹೆ ನೀಡಿದರು.

ಉಪ ಮೇಯರ್ ಶಫಿ ಅಹ್ಮದ್, ಪಾಲಿಕೆ ಆಯುಕ್ತ ಕೆ.ಹೆಚ್. ಜಗದೀಶ್, ಆರೋಗ್ಯಾಧಿಕಾರಿ ಡಾ. ನಾಗರಾಜ್, ಆರೋಗ್ಯ ಸಮಿತಿ ಅಧ್ಯಕ್ಷೆ ರಮಣಿ ರಮೇಶ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

Translate »