ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ
ಕೊಡಗು

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ

September 9, 2018

ಮಡಿಕೇರಿ: ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪದವಿ ಕಾಲೇಜಿನ 3 ವಿದ್ಯಾರ್ಥಿಗಳ ಮೇಲೆ ಕಾಲೇಜಿನ ಹಳೇ ವಿದ್ರ್ಯಾರ್ಥಿಗಳು ಹಲ್ಲೆ ನಡೆಸಿದ್ದು, ಮಡಿಕೇರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದ್ವಿತೀಯ ಬಿ.ಎ. ವ್ಯಾಸಂಗ ಮಾಡುತ್ತಿರುವ ಲಿಖಿತ್, ದೇವಯ್ಯ, ಸುಮನ್ ಎಂಬವರ ಮೇಲೆ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ದರ್ಶನ್, ಸಂಗಮ್ ಮತ್ತು ಇಬ್ಬರು ಹಲ್ಲೆ ನಡೆಸಿದ್ದಾರೆ. ಕಾಲೇಜಿನಲ್ಲಿ ಯೂನಿಯನ್ ಡೇ ನಡೆ ಯುತ್ತಿದ್ದ ಸಂದರ್ಭ ಏಕಾಏಕಿ ಕಾಲೇಜಿಗೆ ಪ್ರವೇಶಿಸಿದ ಹಳೇ ವಿದ್ಯಾರ್ಥಿಗಳು ಹಾಕಿ ಸ್ಟಿಕ್‍ನಿಂದ ಹಲ್ಲೆ ನಡೆಸಿದ್ದು, 3 ವಿದ್ಯಾರ್ಥಿಗಳು ಗಂಭೀರ ಗಾಯ ಗೊಂಡಿದ್ದಾರೆ. ಹಳೇ ದ್ವೇಷ ಸಾಧಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ನಗರ ಪೊಲೀಸರು ತಿಳಿಸಿದ್ದಾರೆ.

Translate »