ಕಾಲೇಜು ರಜೆ ಫೆ.೧೬ವರೆಗೆ ವಿಸ್ತರಣೆ

ಬೆಂಗಳೂರು, ಫೆ.೧೧- ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆ.೧೬ರ ವರೆಗೂ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ವಿಶ್ವ ವಿದ್ಯಾಲಯಗಳು, ಸರಕಾರಿ, ಅನುದಾ ನಿತ ಮತ್ತು ಅನುದಾನ ರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿAಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು ಅನ್ವಯಿಸುತ್ತದೆ. ಆದರೆ, ಈ ಅವಧಿ ಯಲ್ಲಿ ಆನ್‌ಲೈನ್ ಬೋಧನೆ ಎಂದಿ ನಂತೆಯೇ ನಡೆಯಲಿದೆ. ಜೊತೆಗೆ, ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.