ಪುನೀತ್ ರಾಜ್‍ಕುಮಾರ್ 11ನೇ ದಿನದ ಪುಣ್ಯಸ್ಮರಣೆ
News

ಪುನೀತ್ ರಾಜ್‍ಕುಮಾರ್ 11ನೇ ದಿನದ ಪುಣ್ಯಸ್ಮರಣೆ

November 9, 2021

ಬೆಂಗಳೂರು, ನ. 8- ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ನಮ್ನನ್ನಗಲಿ 11 ದಿನ ಕಳೆದಿವೆ. ಇಂದು ಅವರ 11ನೇ ದಿನದ ಪುಣ್ಯಸ್ಮರಣೆ ಕಾರ್ಯ ನಡೆಯಿತು.

ಭಾನುವಾರ ರಾತ್ರಿಯಿಂದಲೇ ಪುಣ್ಯಸ್ಮರಣೆ ಕಾರ್ಯಕ್ಕೆ ಸಕಲ ಸಿದ್ಧತೆಗಳು ಆರಂಭ ವಾಗಿತ್ತು. ಇಂದು ಬೆಳಗ್ಗೆ ಸದಾಶಿವ ನಗರದಲ್ಲಿರುವ ಪುನೀತ್ ರಾಜ್‍ಕುಮಾರ್ ನಿವಾಸದಲ್ಲಿ ಸಂಪ್ರದಾಯದ ಪ್ರಕಾರ ಪೂಜಾ ಕಾರ್ಯಗಳು ನೆರವೇರಿದವು. ಬೆಳಗ್ಗೆ 10 ಗಂಟೆ ಸುಮಾರಿಗೆ ಸಮಾಧಿ ಸ್ಥಳಕ್ಕೆ ಆಗಮಿಸಿದ ಪುನೀತ್ ಪತ್ನಿ ಅಶ್ವಿನಿ, ಪುತ್ರಿ ಯರಾದ ಧೃತಿ, ವಂದಿತಾ, ಸಹೋದರ ರಾದ ಶಿವರಾಜ್‍ಕುಮಾರ್, ರಾಘ ವೇಂದ್ರ ರಾಜ್‍ಕುಮಾರ್ ಸೇರಿದಂತೆ ಕುಟುಂಬಸ್ಥರು, ಹತ್ತಿರದ ಸಂಬಂಧಿಕರು, ಚಿತ್ರರಂಗದ ಪ್ರಮುಖರು ಹಾಗೂ ಗಣ್ಯರು ಅಗಲಿದ ಪುನೀತ್ ರಾಜ್‍ಕುಮಾರ್‍ಗೆ ಇಷ್ಟವಾದ ಆಹಾರ ತಿನಿಸುಗಳ ಎಡೆ ಇಡುವ ಮೂಲಕ ಪೂಜೆ ಸಲ್ಲಿಸಿದರು. ಪುನೀತ್ ರಾಜ್‍ಕುಮಾರ್ ಅವರಿಗೆ ಗಂಡು ಮಕ್ಕಳು ಇಲ್ಲದ ಕಾರಣ ಅವರ ಸಹೋದರ ರಾಘವೇಂದ್ರ ರಾಜ್‍ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್, ಚಿಕ್ಕಪ್ಪನ ಪುಣ್ಯಸ್ಮರಣೆ ಕಾರ್ಯವನ್ನು ನೆರವೇರಿಸಿ, ಕೇಶಮುಂಡನ ಮಾಡಿ ಸಿಕೊಂಡು ಪಿಂಡ ಪ್ರದಾನ ಮಾಡಿದರು. 11ನೇ ದಿನದ ಪುಣ್ಯಸ್ಮರಣೆ ಹಿನ್ನೆಲೆ ಯಲ್ಲಿ ಭಾನುವಾರ ಸಂಜೆ 7 ಗಂಟೆಯಿಂದಲೇ ಸಮಾಧಿ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂ ಧಿಸಲಾಗಿತು. ಇಂದು ಮಧ್ಯಾ ಹ್ನದ ನಂತರ ಸಾರ್ವಜನಿಕರಿಗೆ ಕಂಠೀರವ ಸ್ಟುಡಿಯೋಗೆ ಪ್ರವೇಶ ಕಲ್ಪಿಸಲಾಯಿತು. ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಶಿವರಾಜ್ ಕುಮಾರ್, ನೋವಿ ನೊಂದಿಗೆ 11ನೇ ದಿನದ ಪುಣ್ಯಸ್ಮರಣೆ ಕಾರ್ಯ ಮಾಡಿದ್ದೇವೆ. ಕರ್ನಾಟಕ ಮಾತ್ರವಲ್ಲದೇ ದೇಶದೆಲ್ಲೆಡೆ ಅಭಿಮಾನಿಗಳನ್ನು ಹೊಂದಿದ್ದ ಅಪ್ಪು, ತಂದೆಗೆ ತಕ್ಕ ಮಗನಾಗಿದ್ದರು. ಅವರ ಮೇಲೆ ಅಭಿಮಾನಿಗಳು ಇಟ್ಟಿದ್ದ ಅಭಿ ಮಾನಕ್ಕೆ ಬೆಲೆ ಕಟ್ಟಲಾಗದು ಎಂದರಲ್ಲದೆ, ಯಾರೂ ಪ್ರಾಣ ಕಳೆದುಕೊಳ್ಳಬಾರದು. ಸಾಧ್ಯ ವಾದರೆ ಶಿಕ್ಷಣ ಹಾಗೂ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಅಪ್ಪು ಮೇಲಿನ ಅಭಿಮಾನ ವನ್ನು ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು.

Translate »