ರಾಜ್ಯದಲ್ಲಿ ಅ.1ರಿಂದ ಪದವಿ ಕಾಲೇಜು ಪ್ರಾರಂಭ
ಮೈಸೂರು

ರಾಜ್ಯದಲ್ಲಿ ಅ.1ರಿಂದ ಪದವಿ ಕಾಲೇಜು ಪ್ರಾರಂಭ

August 27, 2020

ಬೆಂಗಳೂರು, ಆ.26(ಕೆಎಂಶಿ)- ಅಕ್ಟೋಬರ್ 1ರಿಂದಲೇ ಪದವಿ ಕಾಲೇಜುಗಳು ಪ್ರಾರಂಭವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಇಂದಿಲ್ಲಿ ಪ್ರಕಟಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್‍ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸ ಲಾಗುವುದು. ಅಕ್ಟೋಬರ್ 1ರಿಂದ ನೇರ ತರಗತಿಗಳು ಶುರುವಾಗಲಿದ್ದು, ತರಗತಿಗಳನ್ನು ಆರಂಭ ಮಾಡು ವುದರ ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ ಬರಬೇಕಿದೆ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಕೆಲ ಪದವಿ ಪರೀಕ್ಷೆಗಳು ನಡೆಯಲಿವೆ ಎಂದರು.

ಸರ್ಕಾರವು ಮುಂದಿನ ತಿಂಗಳಿನಿಂದ ಆನ್‍ಲೈನ್ ಮೂಲಕವೇ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧ ರಿಸಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದರು.

ಶೈಕ್ಷಣಿಕ ವರ್ಷದ ಆರಂಭದ ಜತೆಯಲ್ಲಿಯೇ ಅಂತಿಮ ವರ್ಷದ ಎಲ್ಲ ಪದವಿ, ಡಿಪ್ಲೊಮಾ ಮತ್ತು ಎಂಜಿನಿಯ ರಿಂಗ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸ ಲಾಗಿದೆ. ಜತೆಗೆ, ಬ್ಯಾಕ್‍ಲಾಗ್ (ವಿಷಯ ಉಳಿಸಿಕೊಂಡಿ ರುವ) ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಲಾಗುವುದು. ಯಾವುದೇ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದರು.

ಯಶಸ್ವಿ ಸಿಇಟಿ: ಸರಕಾರವು ರಾಜ್ಯದಲ್ಲಿ 1.94 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಸಿಇಟಿ ನಡೆಸಿದೆ. ಅದರಲ್ಲೂ 63 ಮಂದಿಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳು ಕೂಡ ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆದು ಉತ್ತಮ ರ್ಯಾಂಕ್ ಪಡೆದಿದ್ದಾರೆ.

ನೀಟ್‍ಗೆ ವಿರೋಧ ಸಲ್ಲ: ವಾಸ್ತವ ಸಂಗತಿ ಹೀಗಿರಬೇಕಾದರೆ ಕೆಲವರು ನೀಟ್ ಪರೀಕ್ಷೆ ಯಾಕೆ ಬೇಡ ಅನ್ನುತ್ತಿದ್ದಾರೋ ಗೊತ್ತಿಲ್ಲ. ಅಂಥವರಿಗೆ ಒಂದು ಕಿವಿಮಾತು ಹೇಳಲು ಇಷ್ಟಪಡುತ್ತೇನೆ, ಯಾರೂ ಕೂಡ ಮಕ್ಕಳ ಭವಿಷ್ಯದ ಜತೆ ಚೆಲ್ಲಾಟ ಆಡಬಾರದು.

ಇದರ ಹಿಂದೆ ಏನೋ ಹುನ್ನಾರ ಇದ್ದ ಹಾಗಿದೆ, ಮೆರಿಟ್ ಮೂಲಕ ಸೀಟು ಸಿಗಬಾರದು, ವ್ಯವಸ್ಥಿತವಾಗಿ ಸೀಟು ಹಂಚಿಕೆಯಾಗಬಾರದು ಎಂಬ ದುರುದ್ದೇಶ ಇದ್ದಂತೆ ಕಾಣುತ್ತಿದೆ. ಯಾವುದೋ ಕಾಣದ ಕೈಗಳು ಇದರ ಹಿಂದಿವೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ಮೊದಲಿನಿಂದಲೂ ನೀಟ್ ಪರೀಕ್ಷೆಗೆ ಅಡ್ಡಿಪಡಿಸಲು ಯತ್ನಿಸುತ್ತಲೇ ಇವೆ. ಇದರ ಹಿಂದೆ ದೊಡ್ಡ ಜಾಲವೇ ಇದೆ. ಹಲವಾರು ವರ್ಷಗಳಿಂದ ಈ ದುಷ್ಪ್ರಯತ್ನಗಳನ್ನು ಮಾಡುತ್ತಾ ಬರಲಾಗುತ್ತಿದೆ. ಆದರೆ, ಅವರ ಉದ್ದೇಶ ಈಡೇರುತ್ತಿಲ್ಲ. ಹಾಗೆ ನೋಡಿದರೆ, ನೀಟ್ ಪರೀಕ್ಷೆ ಅತ್ಯುತ್ತಮವಾಗಿದೆ. ಒಂದು ಪರೀಕ್ಷೆ ಮೂಲಕ ದೇಶ ವಿವಿಧೆಡೆ ಪ್ರವೇಶಾತಿ ಪಡೆಯುವ ಪದ್ಧತಿ ಇದಾಗಿದೆ. ಈ ಪರೀಕ್ಷೆ ಆಗಲೇಬೇಕಿದೆ ಎಂದು ಡಾ. ಅಶ್ವತ್ಥನಾರಾ ಯಣ ಒತ್ತಿ ಹೇಳಿದರು. ನೀಟ್ ವಿರೋಧ ಮಾಡುತ್ತಿರುವವರಿಗೆ ಖಂಡಿತವಾಗಿಯೂ ದುರುದ್ದೇಶವಿದೆ. ಆದರೆ ರಾಜ್ಯ ಸರಕಾರ ಈ ಪರೀಕ್ಷೆಗೆ ಬೇಕಾದ ಎಲ್ಲ ಸಹಕಾರ ನೀಡುತ್ತದೆ ಹಾಗೂ ನಾವೂ ಪರೀಕ್ಷೆಗೆ ಸನ್ನದ್ಧರಾಗಿದ್ದೇವೆ ಎಂದು ಅವರು ಸ್ಪಷ್ಟವಾಗಿ ಹೇಳಿದರು.

ನೀಟ್, ಜೆಇಇ ಪರೀಕ್ಷೆ ಮುಂದೂಡಲ್ಲ; ಪರೀಕ್ಷಾ ಕೇಂದ್ರಗಳ ಹೆಚ್ಚಳ
ನವದೆಹಲಿ, ಆ.26- ಕೊರೊನಾ ವೈರಸ್ ಸೋಂಕಿನ ಸಮಸ್ಯೆ ಮಧ್ಯೆ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್)ಯನ್ನು ಮುಂದೂಡ ಬೇಕೆಂಬ ಒತ್ತಾಯ ಕೇಳಿಬರುತ್ತಿರುವುದರ ಮಧ್ಯೆ, ಪರೀಕ್ಷೆ ಮುಂದೂಡುವುದಿಲ್ಲ, ಬದಲಿಗೆ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಸಾಮಾಜಿಕ ಅಂತರ ವನ್ನು ಸೂಕ್ತವಾಗಿ ಕಾಪಾಡಲು ಹೆಚ್ಚಿಸಲಾಗು ವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೇಂದ್ರ ಶಿಕ್ಷಣ ಸಚಿವಾಲಯದಡಿ ಬರುವ ರಾಷ್ಟ್ರೀಯ ಪರೀಕ್ಷಾ ವಿಭಾಗ ಈ ಪರೀಕ್ಷೆಗಳನ್ನು ನಡೆಸುವ ಉಸ್ತುವಾರಿ ವಹಿಸಿಕೊಂಡಿದ್ದು ಈ ಸಂಬಂಧ ನಿನ್ನೆ ಹೇಳಿಕೆ ಬಿಡುಗಡೆ ಮಾಡಿ ಜೆಇಇಗೆ ಈಗಿರುವ 570 ಪರೀಕ್ಷಾ ಕೇಂದ್ರ ಗಳಿಂದ 660ಕ್ಕೆ ಹೆಚ್ಚಿಸಲಾಗುವುದು ಮತ್ತು ನೀಟ್‍ಗೆ 546ಕ್ಕೆ ಪರೀಕ್ಷಾ ಕೇಂದ್ರಗಳನ್ನು ಏರಿಕೆ ಮಾಡಲಾಗುವುದು ಎಂದು ಹೇಳಿದರು.

ಜೆಇಇ ಸೆಪ್ಟೆಂಬರ್ 1ರಿಂದ 6ರವರೆಗೆ ನಡೆಯ ಲಿದೆ. ನೀಟ್ ಸೆಪ್ಟೆಂಬರ್ 13ರಂದು ಏರ್ಪಡಲಿದೆ. ಈ ವರ್ಷ ದೇಶಾದ್ಯಂತ ಕ್ರಮವಾಗಿ 8.58 ಲಕ್ಷ ಹಾಗೂ 15.97 ಲಕ್ಷ ಅಭ್ಯರ್ಥಿಗಳು ಜೆಇಇ ಮತ್ತು ನೀಟ್‍ಗೆ ಹಾಜರಾಗಲಿದ್ದಾರೆ.

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ
ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ ಹಾಜ ರಾಗುವ ಪುನರಾ ವರ್ತಿತ ಅಭ್ಯರ್ಥಿ ಗಳ ಪರೀಕ್ಷಾ ಶುಲ್ಕ ವನ್ನು ಪಾವತಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಆ.28ರವರೆಗೆ ಅವಕಾಶ ನೀಡಿದೆ. ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ ಹಾಜರಾಗುವ ಪುನರಾವರ್ತಿತ ಅಭ್ಯರ್ಥಿಗಳು ಆ.28ರವರೆಗೆ ರೂ. 300ರ ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕ ಸ್ವೀಕರಿಸಿ, ಎನ್‍ಇಎಫ್‍ಟಿ ಚಲನ್ ಮೂಲಕ ಬ್ಯಾಂಕಿಗೆ ಪಾವತಿಸಲು ಆ.28 ಕೊನೆಯ ದಿನ. ಆ.29, ಎನ್‍ಇಫ್‍ಟಿ ಚಲನ್ ಮೂಲಕ ಪರೀಕ್ಷಾ ಶುಲ್ಕವನ್ನು ಬ್ಯಾಂಕ್‍ಗೆ ಪಾವತಿಸಲು, ಬ್ಯಾಂಕ್‍ನ ಮೂಲಕ ಚಲನ್ ಪ್ರತಿ ಮತ್ತು ಇತರೆ ದಾಖಲೆಗಳನ್ನು ಮಂಡಳಿಗೆ ತಲುಪಿಸಲು ಕೊನೆಯ ದಿನ.

ಕಾನೂನು ಪದವಿಗಳ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ಕಾನೂನು ಪದವಿಯ ಪ್ರಥಮ ವರ್ಷದಿಂದ 4ನೇ ವರ್ಷದ ಪದವಿವರೆಗಿನ ಪರೀಕ್ಷೆ ಗಳನ್ನು ಮುಂದೂಡಲಾಗಿದ್ದು, ಕಾನೂನು ಪದವಿ ಅಂತಿಮ ವರ್ಷದ ಪರೀಕ್ಷೆಗಳು ಅಕ್ಟೋ ಬರ್‍ನಲ್ಲಿ ಆನ್‍ಲೈನ್ ಮೂಲಕ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಧುಸ್ವಾಮಿ, ಮುಂದೂ ಡುವ ಪರೀಕ್ಷೆಗಳಲ್ಲಿ ಪಾಸ್ ಆದರೆ ಮಾತ್ರ ಅದರ ಮುಂದಿನ ಸೆಮಿಸ್ಟರ್‍ಗೆ ಹೋಗಲು ಅವಕಾಶ ನೀಡಲಾಗುವುದು ಎಂದರು.

ಈಗಾಗಲೇ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ್ದರು. ಅದೇ ರೀತಿ ಶಿಕ್ಷಣ ತಜ್ಞರು, ರಾಜಕೀಯ ನಾಯಕರು ಕೂಡ ಇದೇ ಬೇಡಿಕೆ ಇಟ್ಟಿದ್ದರು. ಲಾಕ್‍ಡೌನ್ ಮಾರ್ಚ್‍ನಲ್ಲಿ ಆರಂಭವಾದ ಕಾರಣ 3 ತಿಂಗಳು ತರಗತಿಗಳು ನಡೆದಿಲ್ಲ. ಹಾಗಾಗಿ ಪರೀಕ್ಷೆಗಳನ್ನು ಮುಂದೂಡು ತ್ತಿದ್ದು, ಸೆಪ್ಟೆಂಬರ್‍ನಲ್ಲಿ ತರಗತಿಗಳು ಆರಂಭ ವಾಗುತ್ತವೆ. ಆನ್‍ಲೈನ್‍ನಲ್ಲಿಯೂ ತರಗತಿ ಗಳು ಶುರುವಾಗುತ್ತವೆ. ಈಗಿರುವ ಸೆಮಿಸ್ಟರ್ ನಿಂದ ಮುಂದಿನ ಸೆಮಿಸ್ಟರ್‍ಗೆ ತೇರ್ಗಡೆ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.

Translate »