ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಆರಂಭ
ಮೈಸೂರು

ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಆರಂಭ

June 6, 2020

ಮೈಸೂರು, ಜೂ. 5(ಆರ್‍ಕೆ)- ಮೈಸೂ ರಿನ ಬನ್ನೂರು ರಸ್ತೆಯಲ್ಲಿ, ಸಿದ್ಧಾರ್ಥ ನಗರದಲ್ಲಿ ನಿರ್ಮಾಣವಾಗಿರುವ ನೂತನ ಜಿಲ್ಲಾ ಮಟ್ಟದ ಅಧಿಕಾರಿಗಳ ಕಚೇರಿ ಸಂಕೀರ್ಣ ಕಟ್ಟಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಅಧಿಕೃತ ಕಚೇರಿ ಶುಕ್ರವಾರದಿಂದ ಆರಂಭವಾಗಿದೆ.

ಸಂಕೀರ್ಣದ ಮೊದಲ ಮಹಡಿ ಯಲ್ಲಿರುವ ಕೊಠಡಿಯಲ್ಲಿ ಟೇಪು ಕತ್ತರಿ ಸುವ ಮೂಲಕ ಎಸ್.ಟಿ.ಸೋಮಶೇಖರ್ ಅವರು ತಮ್ಮ ಕಚೇರಿ ಕಾರ್ಯನಿರ್ವ ಹಣೆಗೆ ಚಾಲನೆ ನೀಡಿ, ವಿಶೇಷ ಪೂಜೆ ನೆರವೇರಿಸಿದ ಬಳಿಕ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಿದರು.

ಸರ್ಕಾರಿ ಕೆಲಸದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಈ ಕಚೇರಿ ತೆರೆಯಲಿದ್ದು, ಓರ್ವ ಕೆಎಎಸ್ ಅಧಿಕಾರಿ ಹಾಗೂ ಮೂವರು ಸಿಬ್ಬಂದಿ ಕಾರ್ಯನಿರ್ವಹಿಸುವರು. ಸಾರ್ವಜನಿಕರು ತಮ್ಮ ಕೆಲಸ-ಕಾರ್ಯಗಳಿಗೆ ನೇರವಾಗಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಚಿವರು ನುಡಿದರು.

ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಪರಿಶೀಲಿಸಿ ಕ್ರಮ ವಹಿಸಿದ ನಂತರ ಪತ್ರ ಮುಖೇನ ಮಾಹಿತಿ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಗಬೇಕಾದ ಕೆಲಸವನ್ನು ಸ್ಥಳೀಯ ಅಧಿಕಾರಿಗಳೇ ಮಾಡಿಕೊಡು ವರು. ಸರ್ಕಾರದ ಮಟ್ಟದಲ್ಲಿ ಇತ್ಯರ್ಥವಾಗ ಬೇಕಾದ ಕೆಲಸ ಕಾರ್ಯಗಳನ್ನು ತಾವೇ ಆಸಕ್ತಿ ವಹಿಸಿ ಮಾಡಿಸುವುದಾಗಿಯೂ ಇದೇ ವೇಳೆ ಭರವಸೆ ನೀಡಿದರು.

ಕಚೇರಿ ಸಂಕೀರ್ಣದ ಆವರಣದಲ್ಲಿ ಸಚಿವ ಎಸ್.ಟಿ.ಸೋಮಶೇಖರ್, ಗಿಡ ನೆಡುವ ಮೂಲಕ ವಿಶ್ವಪರಿಸರ ದಿನಾಚರಣೆ ಯನ್ನು ಇದೇ ಸಂದರ್ಭ ಆಚರಿಸಿದರು.

ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ. ದೇವೇಗೌಡ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಎಸ್ಪಿ ಸಿ.ಬಿ.ರಿಷ್ಯಂತ್, ಬಿಜೆಪಿ ಮುಖಂಡರಾದ ಶ್ರೀವತ್ಸ, ಹೆಚ್.ವಿ.ರಾಜೀವ್, ಇತರರು ಈ ಸಂದರ್ಭ ಉಪಸ್ಥಿತರಿದ್ದರು.

Translate »