ಯೋಜನೆಗಳ ಜಾರಿಗೆ ಅಧಿಕಾರಿಗಳಲ್ಲಿ ಬದ್ಧತೆ ಮುಖ್ಯ: ಡಾ: ವೆಂಕಟಯ್ಯ
ಮೈಸೂರು

ಯೋಜನೆಗಳ ಜಾರಿಗೆ ಅಧಿಕಾರಿಗಳಲ್ಲಿ ಬದ್ಧತೆ ಮುಖ್ಯ: ಡಾ: ವೆಂಕಟಯ್ಯ

October 17, 2019

ಮೈಸೂರು,ಅ.16(ಎಂಟಿವೈ)- ಸರ್ಕಾರ ಜಾರಿ ಗೊಳಿಸುವ ಎಲ್ಲಾ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ಜನರಿಗೆ ತಲುಪಿಸುವ ಬದ್ಧತೆಯನ್ನು ಅಧಿಕಾರಿಗಳು ಪ್ರದರ್ಶಿಸಿದಾಗ ಮಾತ್ರ ಸುಧಾರಣೆ ತರಲು ಸಾಧ್ಯ ಎಂದು ಸಮಾಜ ಕಲ್ಯಾಣ ಇಲಾಖೆಯ ಎಸ್‍ಸಿಎಸ್‍ಪಿ, ಟಿಎಸ್‍ಪಿ ಕಾರ್ಯಕ್ರಮ ಸಲಹೆಗಾರ, ಸರ್ಕಾರದ ನಿವೃತ್ತ ಪ್ರಧಾನ ಕಾರ್ಯದರ್ಶಿ ಡಾ. ಇ.ವೆಂಕಟಯ್ಯ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಸಭಾಂಗಣ ದಲ್ಲಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಹಾಗೂ ನವ ದೆಹಲಿಯ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋ ಜಿಸಿದ್ದ `ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಪರಿಶಿಷ್ಟ ಪಂಗಡದ ಬುಡ ಕಟ್ಟು ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿ ಗಾಗಿ ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಕರ್ತವ್ಯ, ಜವಾ ಬ್ದಾರಿ’ ಕುರಿತ 4 ದಿನಗಳ ತರಬೇತಿ ಕಾರ್ಯಾಗಾರ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ಸರ್ಕಾರ ಜನರ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆಯನ್ನು ಜಾರಿಗೆ ತರುತ್ತದೆ. ಸದು ದ್ದೇಶವನ್ನಿಟ್ಟುಕೊಂಡು ಅನುಷ್ಠಾನಕ್ಕೆ ತರುವ ಯೋಜನೆ ಯನ್ನು ಯಶಸ್ವಿಯಾಗಿಸುವ ಜವಾಬ್ದಾರಿ ಅಧಿಕಾರಿ ಗಳ ಮೇಲಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ಯೋಜನೆ ಗಳ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಅದರ ಉಪ ಯೋಗವನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇ ಕಾದ ಮಹತ್ತರ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಇದನ್ನು ಮನಗಂಡು ಕಾರ್ಯ ನಿರ್ವಹಿಸಿ ಎಂದು ಅವರು ಸಲಹೆ ನೀಡಿದರು.

ಇದಕ್ಕೂ ಮುನ್ನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ನಿರ್ದೇಶಕ ಪ್ರೊ.ಟಿ.ಟಿ. ಬಸವನ ಗೌಡ ಮಾತನಾಡಿ, ಬುಡಕಟ್ಟು ಜನರ ಏಳಿಗೆಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗು ತ್ತಿದೆ. ಈ ಯೋಜನೆಗಳು ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಬುಡ ಕಟ್ಟು ಅಭಿವೃದ್ಧಿ ಇಲಾಖೆ ಮೂಲಕ ಫಲಾನುಭವಿಗಳಿಗೆ ನೆರವು ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಈ ಮೂರು ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ನಾಲ್ಕು ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ನಾಲ್ಕು ಹಂತಗಳಲ್ಲಿ ತರಬೆÉೀತಿ ನೀಡಲಾಗುತ್ತದೆ ಎಂದು ವಿವರಿಸಿದರು. ಬಯಲುಸೀಮೆ ಹಾಗೂ ಅರಣ್ಯ ಪ್ರದೇಶದಲ್ಲಿರುವ ಬುಡಕಟ್ಟು ಜನರ ಪರಿಸ್ಥಿತಿ ವಿಭಿನ್ನ ವಾಗಿರುತ್ತದೆ. ಕೆಲವು ಅಧಿಕಾರಿಗಳಿಗೆ ಬುಡಕಟ್ಟು ಜನರ ಪರಿಸ್ಥಿತಿ ಬಗ್ಗೆ ಮಾಹಿತಿಯೇ ಇಲ್ಲದಂತಾಗಿದೆ. ಅರಣ್ಯ ಕಾಯ್ದೆ ಸೇರಿದಂತೆ ಬುಡಕಟ್ಟು ಜನರ ಸಂರಕ್ಷಣೆಗೆ ಕೈಗೊಳ್ಳಲಾಗಿರುವ ಕಾರ್ಯಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇದ್ದಾಗ ಮಾತ್ರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಗೊಳಿಸಬಹುದು ಎಂದು ತಿಳಿಸಿದರು. ಕಾರ್ಯಕ್ರಮ ದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಪರ ನಿರ್ದೇಶಕಿ ಊರ್ಮಿಳಾ, ಧಾರವಾಡದ ಕರ್ನಾಟಕ ವಿ.ವಿ.ಯ ಪ್ರಾಧ್ಯಾಪಕ ಪ್ರೊ. ಸಿ.ಜಿ.ಹುಸೇನ್‍ಖಾನ್, ಬುಡಕಟ್ಟು ಸಂಶೋಧನಾ ಸಂಸ್ಥೆ ಜಂಟಿ ನಿರ್ದೇಶಕಿ ಎಸ್. ಪ್ರತಿಭಾ ಇನ್ನಿತರರು ಪಾಲ್ಗೊಂಡಿದ್ದರು.

Translate »