ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಯಶಸ್ವಿಯಾಗಿ
ಮೈಸೂರು

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಯಶಸ್ವಿಯಾಗಿ

October 5, 2021

ಮೈಸೂರು, ಅ.4(ಎಂಟಿವೈ)-ವಿದ್ಯಾರ್ಥಿಗಳು ಕಷ್ಟ ಪಟ್ಟು ಶ್ರಮ ವಹಿಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಯಶಸ್ವಿ ಯಾಗುವ ಮೂಲಕ ಜೀವನ ರೂಪಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ಸಿ.ಕೆ. ಜಗದೀಶ್‍ಕುಮಾರ್ ಸಲಹೆ ನೀಡಿದ್ದಾರೆ.
ಮೈಸೂರಿನ ಕುವೆಂಪುನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೃತ್ತಿಪರ ವಿದ್ಯಾರ್ಥಿನಿಲಯ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ಗಾಂಧಿ ಜಯಂತಿಯ ಅಂಗವಾಗಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾ ರ್ಚನೆ ಮಾಡಿ ವಿದ್ಯಾರ್ಥಿನಿಲಯದ ಆವರಣವನ್ನು ಸ್ವಚ್ಛ ಗೊಳಿಸುವುದರೊಂದಿಗೆ ಗಿಡನೆಟ್ಟು ಕಾರ್ಯಕ್ರಮವನ್ನು ಉದ್ಘಾ ಟಿಸಿ, ನಂತರ ಅವರು ಮಾತನಾಡಿದರು.

ಸರ್ಕಾರದ ಆದೇಶದ ಮೇರೆಗೆ ರಾಜ್ಯಾದ್ಯಂತ ಇರುವ ಎಲ್ಲಾ ಹಾಸ್ಟೆಲ್‍ಗಳಲ್ಲಿಯೂ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳ ಲಾಗಿದೆ. ಅದರಂತೆ ಇಂದು ಚಾಲನೆ ನೀಡಿದ್ದೇವೆ. ಆದರೆ ವಿದ್ಯಾರ್ಥಿ ಗಳು ವಾರಕ್ಕೊಮ್ಮೆ ಕೊಠಡಿಗಳು ಮತ್ತು ಹಾಸ್ಟೆಲ್ ಆವರಣವನ್ನು ಸ್ವಚ್ಛಗೊಳಿಸಿಕೊಳ್ಳಬೇಕು. ಎಲ್ಲಾ ವಿದ್ಯಾರ್ಥಿಗಳು ಗ್ರಾಮೀಣ ಭಾಗ ದಿಂದ ಬಂದವÀರಾಗಿದ್ದೀರಿ. ನಿಮ್ಮ ಪೋಷಕರು ಪಟ್ಟಿರುವ ಕಷ್ಟ ನೆನೆದು, ಶ್ರಮವಹಿಸಿ ಯಶಸ್ಸಿನ ಗುರಿಯಿಟ್ಟುಕೊಂಡು ಓದಬೇಕು. ಪದವಿ ಮುಗಿದ ನಂತರ, ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡು ಎರಡು ವರ್ಷ ಕಠಿಣ ಪರಿಶ್ರಮದಿಂದ ಓದಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ದೆಹಲಿ, ಹೈದರಾಬಾದ್, ಬೆಂಗಳೂರಿನಲ್ಲಿ ಉತ್ತಮ ತರಬೇತಿಯನ್ನು ನೀಡುತ್ತಾರೆ. ನಮ್ಮ ಇಲಾಖೆಯಿಂದಲೂ ಪ್ರೋತ್ಸಾಹ ಧನ ನೀಡುತ್ತೇವೆ. ಸರ್ಕಾರದ ಸವಲತ್ತುಗಳನ್ನು ಉಪಯೋಗಿಸಿಕೊಂಡು ಉತ್ತಮ ಪ್ರಜೆಗಳಾಗಿ ಎಂದರು.

ಇದೇ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಹೆಚ್.ಎಸ್.ಬಿಂದ್ಯಾ ಮಾತನಾಡಿದರು. ಕಾರ್ಯಕ್ರಮ ದಲ್ಲಿ ಇಲಾಖೆ ಕಲ್ಯಾಣಾಧಿಕಾರಿ ಚಂದ್ರಕಲಾ, ವಿಸ್ತರಣಾಧಿಕಾರಿ, ಸತೀಶ್, ನಿಲಯ ಪಾಲಕರಾದ ನಾಗರಾಜ್, ಪರಶುರಾಂ, ಯಶವಂತ ಜಗದೀಶ್ ಕೋರಿ ಉಪಸ್ಥಿತರಿದ್ದರು.

Translate »