ಯಡಿಯೂರಪ್ಪ ಕುಟುಂಬದ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆ ಕೇಸ್ ವಾಪಸ್ ಪಡೆದ ದೂರುದಾರ
ಮೈಸೂರು

ಯಡಿಯೂರಪ್ಪ ಕುಟುಂಬದ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆ ಕೇಸ್ ವಾಪಸ್ ಪಡೆದ ದೂರುದಾರ

November 5, 2020

ಬೆಂಗಳೂರು,ನ.4(ಕೆಎಂಶಿ)-ಯಡಿಯೂರಪ್ಪ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡು ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿ ದ್ದಾರೆ ಎನ್ನುವುದಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಶಿವಮೊಗ್ಗ ವಕೀಲ ವಿನೋದ್ ಎಂಬುವವರು ಹೈಕೋರ್ಟ್‍ನಲ್ಲಿ ದಾಖಲೆ ಸಮೇತ ದಾವೆ ಹೂಡಿದ್ದರು.

ಆದರೆ ವಿಚಾರಣೆಗೆ ಬರುವ ಸಂದರ್ಭದಲ್ಲೇ ವಿನೋದ್ ಅವರು ಮೂರು ಕೇಸು ಹಿಂದಕ್ಕೆ ಪಡೆದಿರುವುದರಿಂದ ಯಡಿಯೂರಪ್ಪನವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿ ಜಾನ್ ಮೈಕಲ್ ಖುನ್ನ ಅವರ ಮುಂದೆ ಹಾಜರಾದ ವಕೀಲರು ಹಿಂದಕ್ಕೆ ಪಡೆಯುವುದಾಗಿ ಅರ್ಜಿ ಸಲ್ಲಿಸಿದ್ದಾರೆ. ವಕೀಲರ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿ, ಅರ್ಜಿ ವಜಾಗೊಳಿಸಿದೆ.

Translate »