ಜುಲೈ 16ರಂದು ಎಸಿಬಿಯಿಂದ ದೂರು ಸ್ವೀಕಾರ
ಮೈಸೂರು

ಜುಲೈ 16ರಂದು ಎಸಿಬಿಯಿಂದ ದೂರು ಸ್ವೀಕಾರ

July 13, 2018

ಮೈಸೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ನಿರ್ವಹಿಸುವಲ್ಲಿ ವಿಳಂಬ, ಲಂಚಕ್ಕಾಗಿ ಒತ್ತಾಯ ಹಾಗೂ ಇನ್ನಿತರ ರೀತಿಯಲ್ಲಿ ತೊಂದರೆ ನೀಡುತ್ತಿರುವ ಅಧಿಕಾರಿ, ನೌಕರರ ವಿರುದ್ಧ ಮೈಸೂರು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಜು.16ರಂದು ಬೆಳಿಗ್ಗೆ 11 ಗಂಟೆಗೆ ಟಿ. ನರಸೀಪುರ ಪರಿವೀಕ್ಷಣಾ ಮಂದಿರದಲ್ಲಿ ಹಾಗೂ ಮಧ್ಯಾಹ್ನ 3-30 ಗಂಟೆಗೆ ನಂಜನಗೂಡಿನ ಪರಿವೀಕ್ಷಣಾ ಮಂದಿರದಲ್ಲಿ, ಜುಲೈ 17 ರಂದು ಬೆಳಿಗ್ಗೆ 11 ಗಂಟೆಗೆ ಹುಣಸೂರು ಪರಿವೀಕ್ಷಣಾ ಮಂದಿರ ಹಾಗೂ ಮಧ್ಯಾಹ್ನ 3-30 ಗಂಟೆಗೆ ಹುಣಸೂರು ಪರಿವೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಲ್ಲಿ ಭ್ರಷ್ಟಾಚಾರದ ಬಗ್ಗೆ ಅರಿವು ಮೂಡಿಸುವ ಮತ್ತು ದೂರನ್ನು ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮೈಸೂರು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »