ಮನೆ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ

ಮಡಿಕೇರಿ: ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ನಿರ್ಮಿಸಿರುವ ಮನೆ ಗಳನ್ನು ಸಂಬಂಧಪಟ್ಟ ಅರ್ಹ ಫಲಾನುಭವಿ ಗಳಿಗೆ ಹಸ್ತಾಂತರ ಮಾಡಲು ಬಾಕಿ ಇರುವ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರಪೇಟೆ ತಾಲೂಕಿನ ಬಸವನ ಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಒದಗಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ಮನೆಗೆ ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಹಾಗೂ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ ಬಾಕಿ ಉಳಿದಿರುವ ಮನೆಗಳ ಕಾಮ ಗಾರಿಗಳನ್ನು ಪೂರ್ಣಗೊಳಿಸುವಂತೆ ಎಂಜಿನಿಯರ್‍ಗೆ ಸೂಚಿಸಿದರು. ಐಟಿಡಿಪಿ ಅಧಿಕಾರಿ ಶಿವಕುಮಾರ್ ಮಾತನಾಡಿ, ಈಗಾ ಗಲೇ ಬಸವನಹಳ್ಳಿಯಲ್ಲಿ 138 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, 34 ಮನೆ ಗಳ ಕಾಮಗಾರಿ ಬಾಕಿ ಇದೆ. ಹಾಗೆಯೇ ಬ್ಯಾಡಗೊಟ್ಟದಲ್ಲಿ 132 ಮನೆಗಳ ಕಾಮ ಗಾರಿ ಪೂರ್ಣಗೊಂಡಿದ್ದು, 21 ಮನೆಗಳ ಕಾಮಗಾರಿ ಬಾಕಿ ಇದೆ ಎಂದು ಮಾಹಿತಿ ನೀಡಿದರು. ಬಾಕಿ ಉಳಿದಿರುವ ಮನೆಗಳ ನಿರ್ಮಾಣ ಕಾಮಗಾರಿ ತಾತ್ಕಾಲಿಕ ಶೆಡ್ ಗಳನ್ನು ತೆರವುಗೊಳಿಸಿದ ನಂತರ ಪ್ರಾರಂ ಭಿಸಲಾಗುವುದು ಎಂದು ಐಟಿಡಿಪಿ ಇಲಾಖೆ ಅಧಿಕಾರಿ ಶಿವಕುಮಾರ್ ತಿಳಿಸಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಅಂತಿಮ ಹಂತದಲ್ಲಿರುವಂತಹ ಕಾಮಗಾರಿಗಳನ್ನು ತುರ್ತಾಗಿ ಒಂದು ವಾರದೊಳಗೆ ಪೂರ್ಣ ಗೊಳಿಸಬೇಕು ಮತ್ತು ಕೆಆರ್‍ಐಡಿಸಿಎಲ್ ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯೀಕರಣ ಇಲಾಖೆಯ ವ್ಯಾಪ್ತಿಗೆ ಬರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಮನೆ ಪಡೆ ದುಕೊಳ್ಳುತ್ತಿರುವ ಅರ್ಹ ಫಲಾನು ಭವಿಗಳಿಗೆ ವಿಶೇಷ ಶಿಬಿರ ಆಯೋ ಜಿಸಿ ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಚುನಾವಣಾ ಗುರು ತಿನ ಚೀಟಿ, ಬ್ಯಾಂಕ್ ಖಾತೆ ಹೊಂದು ವಂತೆ ಹಾಗೂ ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ಪತ್ರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈ ಗೊಳ್ಳುವಂತೆ ಉಪ ವಿಭಾಗಾಧಿಕಾರಿಗೆ ತಿಳಿಸಿದರು. ಸಭೆಯಲ್ಲಿ ಉಪ ವಿಭಾ ಗಾಧಿಕಾರಿ ಜವರೇಗೌಡ, ತಹಶೀಲ್ದಾರ್ ಗೋವಿಂದ ರಾಜು, ಗ್ರಾಮೀಣ ಕುಡಿ ಯುವ ನೀರು ಮತ್ತು ನೈರ್ಮಲ್ಯೀಕರಣ ಇಲಾಖೆಯ ಕಾರ್ಯಪಾಲಕ ಅಭಿಯಂ ತರ ರೇವಣ್ಣರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಇತರರು ಇದ್ದರು.