ತ್ವರಿತವಾಗಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ
ಚಾಮರಾಜನಗರ

ತ್ವರಿತವಾಗಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ

November 1, 2018

ಚಾಮರಾಜನಗರ: ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅಭಿ ವೃದ್ಧಿ ಕಾಮಗಾರಿಗಳ ಸಂಬಂಧ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿವಿಧ ಇಲಾಖೆಗಳಲ್ಲಿ ಕೈಗೊಂಡಿರುವ ಕಾಮಗಾರಿ ಹಾಗೂ ಆರಂಭಿಸಬೇಕಿರುವ ಕಾಮಗಾರಿ ಕುರಿತು ವಿವರ ಪಡೆದ ಸಚಿವರು ನಗರದ ಬಿ.ರಾಚಯ್ಯ ಜೋಡಿರಸ್ತೆ ಕಾಮಗಾರಿ ವಿಳಂಬ ಮಾಡಬಾರದು. ಶೀಘÀ್ರವಾಗಿ ಕಾಮಗಾರಿ ಮುಗಿಸಬೇಕು. ಯಾವುದೇ ದೂರುಗಳು ಬರದಂತೆ ಕೆಲಸ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.

ವಿವಿಧ ಭಾಗಗಳಲ್ಲಿ ನಿರ್ಮಾಣ ಹಂತದಲ್ಲಿರುವ ಹಾಸ್ಟಲ್, ಶಾಲಾ ಕೊಠಡಿಗಳು, ಸಮುದಾಯ ಭವನಗಳು ವಿಳಂಬ ಮಾಡದೆ ತ್ವರಿತಗತಿಯಲ್ಲಿ ಕಾಮಗಾರಿ ನಿರ್ವಹಿಸಬೇಕು. ಅಧಿಕಾರಿಗಳು ಪರಿಶೀಲಿಸಿ ಕಾಮಗಾರಿ ಸುಸೂತ್ರವಾಗಿ ಸಾಗುತ್ತಿದೆಯೇ ಎಂದು ಪರಿಶೀಲಿಸಬೇಕು ಎಂದು ಸಚಿವರು ತಿಳಿಸಿದರು. ನಗರದಲ್ಲಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣವನ್ನು ನೂತನವಾಗಿ ನಿರ್ಮಿ ಸಬೇಕಿದೆ. ನಿವೇಶನ ಹಸ್ತಾಂತರ ಪ್ರಕ್ರಿಯೆಯನ್ನು ಕೂಡಲೇ ಕೈಗೊಳ್ಳಬೇಕು. ಇತರೆ ಇಲಾಖೆ ಗಳು ಅಭಿವೃದ್ಧಿ ಕಾಮಗಾರಿ ಸಂಬಂಧ ನಿವೇಶನಗಳು ಅಗತ್ಯವಿದ್ದರೆ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿ ಮುಂದಿನ ಕ್ರಮ ವಹಿಸಬೇಕು ಎಂದು ನಿರ್ದೆಶೀನ ನೀಡಿದರು. ಸಭೆಯಲ್ಲಿ ಜಿಪಂ ಅಧ್ಯಕ್ಷೆ ಶಿವಮ್ಮ, ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಪಂ ಸಿಇಓ ಡಾ.ಕೆ.ಹರೀಶ್‍ಕುಮಾರ್, ಎಡಿಸಿ ಕೆ.ಎಂ.ಗಾಯತ್ರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳಿದ್ದರು.

Translate »