ಹಂಪಾಪುರ: ಕಾಂಪೌಂಡ್ ಕುಸಿದು ಬಿದ್ದು ಇಬ್ಬರು ವಿದ್ಯಾರ್ಥಿನಿಯರು ಗಾಯ ಗೊಂಡಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕು ಪುರಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ನಡೆದಿದೆ.
ಪುರ ಗ್ರಾಮದ ವಿದ್ಯಾರ್ಥಿನಿ ಅಂಕಿತಾಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಐಶ್ವರ್ಯಳ ಎರಡು ಕಾಲಿಗೆ ಬಲವಾಗಿ ಪೆಟ್ಟು ಬಿದ್ದಿದ್ದು, ಹಂಪಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ P.Éಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ ಎಂದಿನಂತೆ ಶಾಲೆಗೆ ಆಗಮಿಸಿದ್ದ ಮಕ್ಕಳು ಕಾಂಪೌಂಡ್ ಬಳಿ ಇರುವ ಕುಡಿಯುವ ನೀರಿನ ಟ್ಯಾಂಕ್‍ನ ಹತ್ತಿರ ನಿಂತಿದ್ದಾಗ ಗೇಟ್ ಸಮೇತ ಕಾಂಪೌಂಡ್ ಕುಸಿದು ಬಿದ್ದು ಮಕ್ಕಳು ಗಾಯಗೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುದ ಎಸ್‍ಡಿಎಂಸಿ ಅಧ್ಯಕ್ಷ ಬಿ.ಬಸವರಾಜು, ಹಂಪಾಪುರ ಎನ್‍ಆರ್‍ಐಜಿ ವತಿಯಿಂದ ಕಾಂಪೌಂಡ್ ನಿರ್ಮಿಸಿ ಒಂದೂವರೆ ವರ್ಷವಾಗಿದೆ. ನಮಗೆ ಇನ್ನೂ ಹಣ ಬಿಡುಗಡೆಯಾಗಿಲ್ಲ. ಕಾಂಪೌಂಡ್ ಗೇಟ್‍ಗೆ ಪಿಲ್ಲರ್ ಹಾಕದೆ ಗೇಟ್ ಅಳವಡಿಸಿದ್ದು, ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದರು.
ಮುಖ್ಯಶಿಕ್ಷಕ ಮನೋಹರ್ ಮಾತನಾಡಿ, ಕಳಪೆ ಕಾಮಗಾರಿ ಕಾರಣ ಕಾಂಪೌಂಡ್ ಕುಸಿದಿದೆ. ಈ ಬಗ್ಗೆ ಹೆಚ್ಚ್ಚಿನ ಮಾಹಿತಿ ಇಲ್ಲ ಎಂದಿದ್ದಾರೆ. ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ.