ಕಂಪ್ಯೂಟರ್ ಬೇಸಿಕ್ ತರಬೇತಿ
ಮೈಸೂರು

ಕಂಪ್ಯೂಟರ್ ಬೇಸಿಕ್ ತರಬೇತಿ

June 14, 2018

ಮೈಸೂರು:  ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ, ಉನ್ನತೀಕರಣ ಯೋಜನೆಯಡಿ 18 ವರ್ಷ ಮೇಲ್ಪಟ್ಟ ಹಾಗೂ ಕನಿಷ್ಠ ಎಸ್‍ಎಸ್‍ಎಲ್‍ಸಿ ತೇರ್ಗಡೆ ಹೊಂದಿರುವ ನಿರುದ್ಯೋಗಿ ಪುರುಷ/ಮಹಿಳಾ ಅಭ್ಯರ್ಥಿಗಳಿಗೆ ಜೂ. 20 ರಿಂದ ಆಗಸ್ಟ್ 20ರವರೆಗೆ ಒಟ್ಟು 2 ತಿಂಗಳ ಅವಧಿಗೆ ಕಂಪ್ಯೂಟರ್ ಬೇಸಿಕ್ ಉಚಿತ ತರಬೇತಿ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಡಿ.ಎಂ.ರಾಣ (ಪ್ರ) ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಮೈಸೂರು-07 ಇವರನ್ನು ಕಛೇರಿ ವೇಳೆಯಲ್ಲಿ ಅಥವಾ ದೂರವಾಣ ಸಂಖ್ಯೆ:0821-2489972ರಲ್ಲಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವುದು. ಅರ್ಹ ನಿರುದ್ಯೋಗ ಪುರುಷ/ಮಹಿಳಾ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ತರಬೇತಿಗೆ ಭಾಗವಹಿಸಿ ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಲಾಗಿದೆ.

Translate »