ಅರೆಕೆರೆ ನಾಡಕಚೇರಿಯಲ್ಲಿ   ಕಂಪ್ಯೂಟರ್, ಲ್ಯಾಪ್‍ಟಾಪ್ ಕಳವು
ಮಂಡ್ಯ

ಅರೆಕೆರೆ ನಾಡಕಚೇರಿಯಲ್ಲಿ ಕಂಪ್ಯೂಟರ್, ಲ್ಯಾಪ್‍ಟಾಪ್ ಕಳವು

January 15, 2019

ಮಂಡ್ಯ: ಖದೀಮರ ತಂಡವೊಂದು ನಾಡ ಕಚೇರಿಗೆ ಕನ್ನ ಹಾಕಿ, ಕಂಪ್ಯೂಟರ್, ಲ್ಯಾಪ್‍ಟಾಪ್ ಕಳವು ಮಾಡಿ ಪರಾರಿಯಾಗಿರುವ ಪ್ರಕರಣ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಕಳ್ಳರು ನಾಡಕಚೇರಿಯ ಬಾಗಿಲು ಮುರಿದು ಒಳನುಗ್ಗಿ ಈ ಕೃತ್ಯ ಎಸಗಿದ್ದಾರೆ. ಕಚೇರಿಯಲ್ಲಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ, ಕೆಲ ಫೈಲ್‍ಗಳು ಹಾಗೂ ಬೆಲೆ ಬಾಳುವ ವಸ್ತುಗಳನ್ನು ದೋಚಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಅರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Translate »