ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ ಖಂಡಿಸಿ ಇಂದು ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಮೈಸೂರು

ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ ಖಂಡಿಸಿ ಇಂದು ವಿವಿಧ ಸಂಘಟನೆಗಳಿಂದ ಪ್ರತಿಭಟನೆ

August 26, 2020

ಮೈಸೂರು, ಆ.25 (ಆರ್‍ಕೆಬಿ)- ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ವಡಗಾವಿಯಲ್ಲಿ ಅಪಮಾನ ಮಾಡಿದ ಬೆಳಗಾವಿ ಜಿಲ್ಲಾಡಳಿತದ ನಡೆ ಖಂಡಿಸಿ ವಿವಿಧ ಸಂಘಟನೆಗಳು ಆಗಸ್ಟ್ 26ರ ಬೆಳಗ್ಗೆ 11ಕ್ಕೆ ಮೈಸೂರು ಜಿಲ್ಲಾಧಿ ಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಿವೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಕಾರ್ಯಾಧ್ಯಕ್ಷ ಬಿ.ಸುಬ್ರಹ್ಮಣ್ಯ ಹೇಳಿದರು.

ಮೈಸೂರಲ್ಲಿ ಮಂಗಳವಾರ ಸುದ್ದಿ ಗೋಷ್ಠಿ ನಡೆಸಿದ ಅವರು, ರಾಯಣ್ಣ ಅವರ ಪ್ರತಿಮೆಯನ್ನು ಅದೇ ಸ್ಥಳದಲ್ಲಿ ಮರಳಿ ಸ್ಥಾಪಿಸಬೇಕು. ಇಲ್ಲವಾದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಕರ್ನಾಟಕ ಪ್ರದೇಶ ಕುರುಬರ ಸಂಘ, ದಲಿತ ಸಂಘಟನೆಗಳ ಒಕ್ಕೂಟ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಕನ್ನಡಪರ ಸಂಘಟನೆಗಳ ಒಕ್ಕೂ ಟದ ಆಶ್ರಯದಲ್ಲಿ ನಾಳೆ ನಡೆಯುವ ಪ್ರತಿಭಟನೆಯಲ್ಲಿ ಪ್ರೊ. ಕಾಳೇಗೌಡ ನಾಗ ವಾರ, ಪ್ರೊ.ಮಹೇಶ್‍ಚಂದ್ರಗುರು, ಪ್ರೊ. ಕೆ.ಎಸ್.ಭಗವಾನ್ ಇನ್ನಿತರರು ಭಾಗ ವಹಿಸಲಿದ್ದಾರೆ ಎಂದರು.

ಕಸಾಪ ಜಿಲ್ಲಾ ಘಟಕ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು, ಪಾಲಿಕೆ ಸದಸ್ಯ ಜೆ.ಗೋಪಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷೆ ರೇಖಾ ಪ್ರಿಯ ದರ್ಶಿನಿ, ದಸಂಸ ಒಕ್ಕೂಟದ ಪಿ.ರಾಜು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Translate »