ಬಸ್ ಪ್ರಯಾಣ ದರ ಏರಿಕೆಗೆ ಖಂಡನೆ
ಮೈಸೂರು

ಬಸ್ ಪ್ರಯಾಣ ದರ ಏರಿಕೆಗೆ ಖಂಡನೆ

February 29, 2020

ಮೈಸೂರು,ಫೆ.28(ವೈಡಿಎಸ್)-ರಾಜ್ಯ ಸರ್ಕಾರವು ಶೇ.12ರಷ್ಟು ಬಸ್ ಪ್ರಯಾಣ ದರ ಏರಿಸಿರುವುದನ್ನು ಖಂಡಿಸಿ ಕೆಪಿಸಿಸಿ ಮಹಿಳಾ ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಯಿತು. ನಗರದ ಗೌನ್‍ಹೌಸ್ ವೃತ್ತದ ಬಳಿ ಶುಕ್ರವಾರ ಮಧ್ಯಾಹ್ನ ಜಮಾವಣೆ ಗೊಂಡ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ದಿನೇ ದಿನೇ ಬೆಲೆ ಹೆಚ್ಚಳದಿಂದ ಜನಸಾಮಾನ್ಯರು ಪರದಾಡುವಂತಾಗಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ದರವನ್ನು 150 ರೂ.ಗಳಷ್ಟು ಹೆಚ್ಚಿಸಿತ್ತು. ಈಗ ರಾಜ್ಯ ಸರ್ಕಾರ ಶೇ.12ರಷ್ಟು ಬಸ್ ಪ್ರಯಾಣ ದರ ಹೆಚ್ಚಳ ಮಾಡಿದ್ದು, ಜನರಿಗೆ ಗಾಯದ ಮೇಲೆ ಬರ ಎಳೆದಂತಾಗಿದೆ. ಇದು ಜನವಿರೋಧಿ ತೀರ್ಮಾನ. ರಾಜ್ಯ ಸರ್ಕಾರ ಕೂಡಲೇ ದರ ಏರಿಕೆ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

Translate »