ಮಾಜಿ ಶಾಸಕ ಹೆಚ್.ಎಸ್.ಪ್ರಕಾಶ್‍ಗೆ ಭಾವಪೂರ್ಣ ಶ್ರದ್ಧಾಂಜಲಿ
ಹಾಸನ

ಮಾಜಿ ಶಾಸಕ ಹೆಚ್.ಎಸ್.ಪ್ರಕಾಶ್‍ಗೆ ಭಾವಪೂರ್ಣ ಶ್ರದ್ಧಾಂಜಲಿ

November 28, 2018

ಹಾಸನ:  ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ಹೆಚ್.ಎಸ್.ಪ್ರಕಾಶ್ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನರಾ ಗಿದ್ದು, ಅಗಲಿದ ನಾಯಕನಿಗೆ ಜಿಲ್ಲಾದ್ಯಂತ  ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ.

ಬೆಂಗಳೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಯಲ್ಲಿ ಬೆಳಿಗ್ಗೆ 11.45ರಲ್ಲಿ ಪ್ರಕಾಶ್ ಕೊನೆಯುಸಿರೆಳೆದರು. ಬಳಿಕ ಅವರ ಪಾರ್ಥಿವ ಶರೀರವನ್ನು ಆಂಬುಲೆನ್ಸ್ ಮೂಲಕ ಹಾಸನದ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಸಂಜೆ 6 ಗಂಟೆ ಸುಮಾರಿನಲ್ಲಿ ತರಲಾಯಿತು. ಬಳಿಕ ರಾತ್ರಿ 8 ಗಂಟೆ ವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ನೂರಾರು ಸಂಖ್ಯೆಯಲ್ಲಿ ಪ್ರಕಾಶ್ ಅವರ ಅಭಿಮಾನಿ ಗಳು ಧಾವಿಸಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಅಗಲಿದ ನಾಯಕ ನನ್ನು ಕಂಡು ಕಂಬನಿ ಮಿಡಿದರು. ರಾತ್ರಿ 8 ಗಂಟೆಯ ಸುಮಾರಿನಲ್ಲಿ ನಗರದ ಹೇಮಾ ವತಿ ನಗರದಲ್ಲಿರುವ ಅವರ ನಿವಾಸಕ್ಕೆ ಪ್ರಕಾಶ್ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಯಿತು. ಬೆಳಿಗ್ಗೆವರೆಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುವುದು. ಬಳಿಕ, ನಗರದ ಎಂ.ಜಿ. ರಸ್ತೆ, ಸಾಲಿಗಾಮೆ ರಸ್ತೆ, ಬಿಎಂ.ರಸ್ತೆ, ಎನ್. ಆರ್.ವೃತ್ತ ಮೂಲಕ ಹೇಮಾವತಿ ಪ್ರತಿಮೆ ಮುಂಭಾಗದ ರಸ್ತೆಯಲ್ಲಿ ಸಾಗಿ ಸಮೀ ಪದ ಶಾಂತಿ ಗ್ರಾಮದ ಆಲದಹಳ್ಳಿಯ ಪ್ರಕಾಶ್ ಅವರ ಸ್ವ ಜಮೀನಿನಲ್ಲಿ ಸಕಲ ಸರ್ಕಾರಿ ಗೌರವ ಹಾಗೂ ಒಕ್ಕಲಿಗ ಸಂಪ್ರದಾಯ ದಂತೆ ಅಂತ್ಯಕ್ರಿಯೆ ನಡೆಸಲಾಗುವುದು.

ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ ರೇವಣ್ಣ, ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್, ಉಪಾಧ್ಯಕ್ಷ ಸುಪ್ರದೀಪ್ ಯಜ ಮಾನ್, ಸ್ಥಾಯಿಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ, ಶಾಸಕರಾದ ಹೆಚ್.ಕೆ.ಕುಮಾರ ಸ್ವಾಮಿ, ಶಿವಲಿಂಗೇ ಗೌಡ, ರಾಮಸ್ವಾಮಿ, ಸಿ. ಎನ್.ಬಾಲಕೃಷ್ಣ, ಲಿಂಗೇಶ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಇತರೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಅಭಿಮಾನಿಗಳಿಂದ ಅಂತಿಮ ದರ್ಶನ:  ಮಾಜಿ ಶಾಸಕ ಪ್ರಕಾಶ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ಪ್ರಕಾಶ್ ಅವರ ನಿವಾಸಕ್ಕೆ ಧಾವಿಸಿ,  ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಹೆಚ್.ಎಸ್.ಪಿ ರಾಜಕೀಯ ಜೀವನ 

ಪ್ರಕಾಶ್ ಅವರು 1994, 2004, 2008 ಹಾಗೂ 2013ರಲ್ಲಿ ಜೆಡಿಎಸ್‍ನಿಂದÀ ಗೆದ್ದು ಶಾಸಕರಾಗಿದ್ದರು. 1999 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿದ್ದರು. 2001ರಿಂದ ನಗರದ ಸಂಜೀವಿನಿ ಸಹಕಾರಿ ಆಸ್ಪತ್ರೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. 1983 -1989ರವರೆಗೆ ಹಾಸನ ನಗರಸಭೆ ಸದಸ್ಯರಾಗುವ ಮೂಲಕ ರಾಜಕೀಯ ಜೀವನ ಆರಂಭಿಸಿದ ಪ್ರಕಾಶ್, 1985-87 ರವರೆಗೆ ಎರಡು ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. 1994ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಹಾಸನ ವಿಧಾನಸಭಾ ಕ್ಷೇತ್ರವನ್ನು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ ಯಾಗಿದ್ದರು. ನಂತರ 1999ರಲ್ಲಿ ಬಿಜೆಪಿಯ ಕೆ.ಹೆಚ್.ಹನುಮೇ ಗೌಡರ ಎದುರು ಪರಾಭವಗೊಂಡಿದ್ದರು. ಬಳಿಕ ಸತತವಾಗಿ ಮೂರು ಬಾರಿ ಹಾಸನ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

2018 ರಲ್ಲಿ ಬಿಜೆಪಿಯ ಪ್ರೀತಂ ಗೌಡ ಎದುರು ಪರಾಭವಗೊಂಡಿದ್ದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಅಚ್ಚುಮೆಚ್ಚಿನವರಾಗಿದ್ದ ಪ್ರಕಾಶ್ ಅವರಿಗೆ ಈ ಬಾರಿ ನಿಗಮದ ಅಧ್ಯಕ್ಷ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು. ಪುಸ್ತಕ ಓದುವ, ಸಂಗೀತ ಕೇಳುವ, ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಇವರು ಮೂಲತಃ ಕೃಷಿಕರಾಗಿದ್ದರು.

ಗೌಡರ ಮಾನಸ ಪುತ್ರ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ರಿಗೆ ಅತ್ಯಂತ ನಿಕಟವರ್ತಿಯಾಗಿದ್ದ ಪ್ರಕಾಶ್ ಅವರು ದೇವೇಗೌಡರ ಮಾನಸ ಪುತ್ರ ಎಂದೇ ಹೇಳಲಾಗುತ್ತಿತ್ತು. 4 ಬಾರಿ ಶಾಸಕರಾಗಿ ಹಲವು ಅಭಿವೃದ್ಧಿ ಕಾರ್ಯ ಗಳನ್ನು ಮಾಡಿದ್ದರು. ಗೌಡರ ಗÀರಡಿ ಯಲ್ಲಿ ಪಳಗಿದ್ದ ಅವರು 1983ರಲ್ಲಿ ನಗರಸಭೆ ಸದಸ್ಯರಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿದರು.

1985-87ರಲ್ಲಿ ನಗರಸಭೆ ಅಧ್ಯಕ್ಷ ರಾಗಿಯೂ ಅಧಿಕಾರ ನಡೆಸಿದ್ದರು. 1994 ರಲ್ಲಿ ಮೊದಲ ಬಾರಿಗೆ ಹಾಸನ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾ ದರು. ಒಟ್ಟು ನಾಲ್ಕು ಬಾರಿ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು.

 

ಉಸ್ತುವಾರಿ ಸಚಿವ ರೇವಣ್ಣರಿಂದ ಸಂತಾಪ

ಮಾಜಿ ಶಾಸಕ ಹೆಚ್.ಎಸ್.ಪ್ರಕಾಶ್ ಅವರು ನಿಧನದ ಸುದ್ದಿ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಅವರ ಸಾವಿನಿಂದ ಕ್ಷೇತ್ರಕ್ಕೆ ಜನತೆಗೆ ತುಂಬ ಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ಸಂತಾಪ ಸೂಚಿಸಿದರು.

ಇದೇ ವೇಳೆ ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜು ಹೊರಟ್ಟಿ, ಸಹಕಾರ ಸಚಿವರಾದ ಬಂಡೆಪ್ಪ ಕಾಶೆಂ ಪುರ, ಶಾಸಕರಾದ ಎ.ಟಿ.ರಾಮಸ್ವಾಮಿ, ಕೆ.ಎಂ.ಶಿವಲಿಂಗೇಗೌಡ, ಹೆಚ್.ಕೆ.ಕುಮಾರಸ್ವಾಮಿ, ಸಿ.ಎನ್.ಬಾಲಕೃಷ್ಣ, ಕೆ.ಎಸ್.ಲಿಂಗೇಶ್, ಶ್ರೀ ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಡಾ.ಹೆಚ್. ನಾಗರಾಜ್, ಕಾರ್ಯದರ್ಶಿ ಚನ್ನವೀರಪ್ಪ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ಜಿಲ್ಲಾಡಳಿತದಿಂದ ಮಾಜಿ ಶಾಸಕ ಪ್ರಕಾಶ್‍ಗೆ ಅಂತಿಮ ನಮನ

ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡ ಲಾಗಿದ್ದು, ಜಿಲ್ಲಾಡಳಿತದಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ಅವರು ಗೌರವ ನಮನ ಸಲ್ಲಿಸಿದರು.

ಮಾಜಿ ಶಾಸಕರಾದ ಹೆಚ್.ಎಂ.ವಿಶ್ವನಾಥ್, ಮಾಜಿ ರಾಜ್ಯಸಭಾ ಸದಸ್ಯರಾದ ಪಟೇಲ್ ಶಿವರಾಂ, ಹೆಚ್.ಕೆ.ಜವರೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್, ಉಪಾಧ್ಯಕ್ಷ ಸುಪ್ರದೀಪ್ ಯಜಮಾನ್, ತಾಲೂಕು ಪಂಚಾಯಿತಿ ಅಧ್ಯಕ್ಷ ಬಿ.ಟಿ. ಸತೀಶ್, ಮುಖಂಡರಾದ ಹೆಚ್.ಕೆ.ಮಹೇಶ್, ಮುಖಂಡರಾದ ಹೆಚ್.ಎಂ.ಶಿವಣ್ಣ, ಡಾ.ಗುರುರಾಜ್ ಹೆಬ್ಬಾರ್ ಸೇರಿದಂತೆ ಇತರೆ ಗಣ್ಯರು ಹಾಗೂ ಸಾರ್ವಜನಿಕರು ಅಂತಿಮ ದರ್ಶನ ಪಡೆದರು.

Translate »