ತ್ರಿವಿಧ ದಾಸೋಹಿಗೆ ವಿವಿಧ ಸಂಘಟನೆಗಳಿಂದ ಶ್ರದ್ಧಾಂಜಲಿ
ಮಂಡ್ಯ

ತ್ರಿವಿಧ ದಾಸೋಹಿಗೆ ವಿವಿಧ ಸಂಘಟನೆಗಳಿಂದ ಶ್ರದ್ಧಾಂಜಲಿ

January 23, 2019

ಪಾಂಡವಪುರ: ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಡಾ.ಶಿವಕುಮಾರಸ್ವಾಮೀಜಿ ಅವರಿಗೆ ತಾಲೂಕಿನ ವಿವಿಧ ಸಂಘಟನೆ ಗಳು ಶ್ರದ್ಧಾಂಜಲಿ ಸಲ್ಲಿಸಿದವು.

ಕರ್ನಾಟಕ ರಾಜ್ಯ ರೈತ ಸಂಘ: ಕರ್ನಾ ಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶ್ರೀಶಿವಕುಮಾರಶ್ರೀಗಳಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಪಟ್ಟಣದ ಐದು ದೀಪದ ವೃತ್ತದಲ್ಲಿ ಸಿದ್ಧ ಗಂಗಾ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ರ್ಪಾಚನೆ ಮಾಡುವ ಮೂಲಕ ರೈತ ಸಂಘದ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿ ಅವರ ಆತ್ಮಕ್ಕೆ ಶಾಂತಿ ಕೋರಿದರು.

ರೈತ ನಾಯಕಿ ಸುನೀತಾ ಪುಟ್ಟಣ್ಣಯ್ಯ, ನಡೆದಾಡುವ ದೇವರೆಂದೇ ಹೆಸರಾಗಿದ್ದ ಸಿದ್ಧಗಂಗಾಶ್ರೀಗಳ ಲಿಂಗೈಕ್ಯದಿಂದಾಗಿ ಕರುನಾಡು ಅನಾಥವಾಗಿದೆ. ಲಕ್ಷಾಂತರ ಮಕ್ಕಳಿಗೆ ವಿದ್ಯಾ ದಾನ ಮಾಡಿದ ಡಾ. ಶಿವಕುಮಾರ ಸ್ವಾಮೀಜಿ ಗಳು ಮತ್ತೊಮ್ಮೆ ಹುಟ್ಟಿ ಬರಲಿ ಎಂದರು.

ತಾಲೂಕು ರೈತ ಸಂಘದ ಅಧ್ಯಕ್ಷ ಎ.ಎಲ್. ಕೆಂಪೂಗೌಡ ರೈತ ಮುಖಂಡರಾದ ಕೆ.ಎಸ್.ದಯಾನಂದ್, ನಾಗರಾಜು, ಪ್ರಕಾಶ್, ಹರೀಶ್, ರಾಜಶೇಖರ್, ರಾಜ ಗೋಪಾಲ್, ಲಕ್ಷ್ಮೇಗೌಡ ಸೇರಿದಂತೆ ಇತರರಿದ್ದರು.

ಪತ್ರಕರ್ತರ ಸಂಘದಿಂದ ಶ್ರದ್ದಾಂಜಲಿ: ಪಟ್ಟಣದ ತಾಲೂಕು ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ಡಾ.ಶಿವ ಕುಮಾರಸ್ವಾಮೀಜಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಬಿ.ಎಸ್. ಜಯರಾಮು ಮಾತನಾಡಿ, ಸರಳ ಸಜ್ಜನಿಕೆಯ ವ್ಯಕ್ತಿತ್ವದ ಸಿದ್ಧಗಂಗಾಶ್ರೀಗಳ ತತ್ವಾದರ್ಶವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದರು.
ಸಭೆಯಲ್ಲಿ ಗೌರವಾಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಗ್ರಾ.ಉಪಾಧ್ಯಕ್ಷ ಸಿ.ಆರ್.ರಮೇಶ್, ತಾ.ಪ್ರಧಾನ ಕಾರ್ಯದರ್ಶಿ ಚನ್ನಮಾದೇ ಗೌಡ, ಖಜಾಂಚಿ ಅಂಥೋಣಿ ರಾಬರ್ಟ್ ರಾಜ್, ಸಹ ಕಾರ್ಯದರ್ಶಿ ಅನಿಲ್ ಕುಮಾರ್, ಪ್ರಕಾಶ್, ರಘುವೀರ್, ಎಸ್. ರವಿಕುಮಾರ್ ಸೇರಿದಂತೆ ಹಲವರಿದ್ದರು.

ವಿಜಯ ಕಾಲೇಜಿನಲ್ಲಿ ಶ್ರದ್ಧಾಂಜಲಿ: ಡಾ.ಶಿವಕುಮಾರಸ್ವಾಮೀಜಿ ಅವರಿಗೆ ಪಟ್ಟಣದ ವಿಜಯ ಕಾಲೇಜಿನಲ್ಲಿ ಗೌ.ಕಾರ್ಯ ದರ್ಶಿ ಕೆ.ವಿ.ಬಸವರಾಜು ಅಧ್ಯಕ್ಷತೆಯಲ್ಲಿ ಶ್ರದ್ಧಾಂಜಲಿ ಸಭೆ ಸಲ್ಲಿಸಲಾಯಿತು.

ಸಭೆಯಲ್ಲಿ ಡಾ.ಶಿವಕುಮಾರಸ್ವಾಮೀಜಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಸಭೆಯಲ್ಲಿ ಆಡಳಿತ ಮಂಡಳಿ ಪದಾಧಿಕಾರಿಗಳು, ನಿರ್ದೇ ಶಕರು, ಉಪನ್ಯಾಸಕ, ಶಿಕ್ಷಕ ವೃಂದ ಹಾಜರಿದ್ದರು.

ಚರ್ಚ್ ವತಿಯಿಂದ ಸಭೆ: ಪಟ್ಟಣದ ಸ್ವರ್ಗಾರೋಹಣ ದೇವಾಲಯ (ಚರ್ಚ್) ದಲ್ಲಿ ಕ್ರೈಸ್ತ ಭಕ್ತಾದಿಗಳಿಂದ ಶ್ರದ್ಧಾಂಜಲಿ ಸಭೆ ನಡೆಯಿತು. ಚರ್ಚ್ ಫಾದರ್ ಟಿ.ವಿನ್ಸಂಟ್ ನೇತೃತ್ವದಲ್ಲಿ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಲಾಯಿತು.

Translate »