ನ್ಯಾಯಬೆಲೆ ಅಂಗಡಿಗಳ ಮುಂದೆ ಜನದಟ್ಟಣೆ ಆಗದಂತೆ ಎಚ್ಚರ ವಹಿಸಲು ಸೂಚನೆ
ಕೊಡಗು

ನ್ಯಾಯಬೆಲೆ ಅಂಗಡಿಗಳ ಮುಂದೆ ಜನದಟ್ಟಣೆ ಆಗದಂತೆ ಎಚ್ಚರ ವಹಿಸಲು ಸೂಚನೆ

April 10, 2020

ಮಡಿಕೇರಿ ಏ.9- ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಹೋಬಳಿ ಮಟ್ಟದಲ್ಲಿ ನೇಮಕ ಮಾಡಲಾಗಿರುವ ನೋಡಲ್ ಅಧಿಕಾರಿ ಗಳೂ ಸಹ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿ ದ್ದಾರೆ ಎಂದು ಶಾಸಕ ಕೆ.ಜಿ ಬೋಪಯ್ಯ ತಿಳಿಸಿದ್ದಾರೆ.

ನಗರದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣ ದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಎಪಿಲ್ ಮತ್ತು ಬಿಪಿಎಲ್ ಕಾರ್ಡುದಾರ ರಿಗೆ ಸರಿಯಾದ ರೀತಿಯಲ್ಲಿ ಪಡಿತರ ವಿತರಣೆಯಾಗ ಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಹೆಚ್ಚು ಜನ ಜಮಾವಣೆ ಯಾಗದಂತೆ ನೋಡಿಕೊಂಡು ಎಲ್ಲರಿಗೂ ಪಡಿತರ ವಿತರಣೆ ಮಾಡಿ. ನ್ಯಾಯಬೆಲೆ ಅಂಗಡಿಗಳೂ ಸಹ ಸರ್ಕಾರದ ನಿರ್ದೇಶನದಂತೆ ಸಮಯಪಾಲನೆ ಮಾಡುವ ಬಗ್ಗೆ ಗಮನ ಹರಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಆಹಾರ ಇಲಾಖೆಯ ಉಪನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ ಮಾತನಾಡಿ, ಜಿಲ್ಲೆಯಾದ್ಯಂತ ಈಗಾಗಲೇ ಪಡಿತರ ವಿತರಣೆ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಶೇ. 60 ರಷ್ಟು ಪಡಿತರ ವಿತರಣೆ ಕಾರ್ಯ ಮುಗಿದಿದೆ. ಇನ್ನುಳಿದಂತೆ ಪಡಿತರ ವಿತರಣೆ ನಡೆಯುತ್ತಿದ್ದು ಶೀಘ್ರವೇ ಈ ಕಾರ್ಯ ಮುಗಿಯಲಿದೆ ಎಂದು ತಿಳಿಸಿದರು.

ಎಲ್ಲೆಲ್ಲಿ ಹೆಚ್ಚು ಜನಸಂದಣಿ ಇದೆಯೋ ಅಲ್ಲಿ ಮ್ಯಾನ್ಯು ಯಲ್ ಆಗಿಯೇ ವಿತರಣಾ ಕಾರ್ಯ ನಡೆಯುತ್ತಿದೆ. ಜೊತೆಗೆ ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳು ನಿರ್ದಿಷ್ಟ ಸಮಯಕ್ಕೆ ತೆಗೆದು ಸಾರ್ವಜನಿಕರಿಗೆ ಪಡಿತರ ವಿತರಿಸು ವಂತೆ ತಿಳಿಸಲಾಗಿದೆ ಎಂದು ಹೇಳಿದರು.

ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಮಾತನಾಡಿ, ಸರ್ಕಾರದಿಂದ ಮುಂದಿನ ವಾರದಲ್ಲಿ ರ್ಯಾಪಿಡ್ ಟೆಸ್ಟಿಂಗ್ ಕಿಟ್ ಬರಲಿದ್ದು, ಈ ಮೂಲಕ ಹೆಚ್ಚಿನ ಸ್ಯಾಂಪಲ್ ಪರೀಕ್ಷೆಗೆ ನೆರವಾಗಲಿದೆ. ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಾರ್ವಜನಿಕ ರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು. ತಾಲೂಕು ಪಂಚಾಯತಿ ಕಾರ್ಯನಿರ್ವಾ ಹಣಾಧಿಕಾರಿ ಲಕ್ಷ್ಮೀ ಮಾತನಾಡಿ, ನೋಡಲ್ ಅಧಿಕಾರಿಗಳು ಹೋಬಳಿ ಮಟ್ಟದಲ್ಲಿ ಯಾವುದೇ ರೀತಿಯ ಲೋಪ ವಾಗದಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. ಅಲ್ಲದೆ ಬಿಸಿಯೂಟದ ಆಹಾರ ಪದಾರ್ಥವನ್ನು ಸಂಬಂಧ ಪಟ್ಟ ಶಾಲೆಗಳ ಮೂಲಕ ಪೋಷಕರ ಮುಖಾಂತರ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಈಗಾಗಲೇ ಎಲ್ಲರ ಶ್ರಮದ ಫಲವಾಗಿ ಜಿಲ್ಲೆಯು ಕೊರೊನಾ ವೈರಸ್‍ನಿಂದ ಮುಕ್ತವಾಗಿದೆ. ಇನ್ನು ಮುಂದೆಯೂ ಸಹ ಗಡಿ ಭಾಗಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕು. ಹೊರ ರಾಜ್ಯ, ಜಿಲ್ಲೆಗಳಿಂದ ಯಾರೂ ಸಹ ಅಕ್ರಮವಾಗಿ ಗಡಿ ಪ್ರವೇಶಿಸ ದಂತೆ ಎಚ್ಚರ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಬಕಾರಿ ಉಪ ಆಯುಕ್ತರಾದ ಪಿ.ಬಿಂದುಶ್ರೀ, ಡಿವೈಎಸ್‍ಪಿ ದಿನೇಶ್ ಕುಮಾರ್, ತಹಶೀಲ್ದಾರ ಮಹೇಶ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜು, ಬಿಇಓ ಗಾಯತ್ರಿ ಇತರರು ಇದ್ದರು.

Translate »