ನಾಳೆ ಬ್ರಾಹ್ಮಣ ಸಂಘದಿಂದ ಶಾಸಕ ಎಸ್.ಎ.ರಾಮದಾಸ್‍ಗೆ ಅಭಿನಂದನೆ
ಮೈಸೂರು

ನಾಳೆ ಬ್ರಾಹ್ಮಣ ಸಂಘದಿಂದ ಶಾಸಕ ಎಸ್.ಎ.ರಾಮದಾಸ್‍ಗೆ ಅಭಿನಂದನೆ

May 26, 2018

ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರದಿಂದ ಬಿಜೆಪಿಯಿಂದ ಅತ್ಯಧಿಕ ಮತಗಳಿಂದ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಗೆ ಮೇ 27ರಂದು ಸಂಜೆ 4 ಗಂಟೆಗೆ ಮೈಸೂರಿನ ಸರಸ್ವತಿಪುರಂನ ಕೃಷ್ಣಧಾಮದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಬ್ರಾಹ್ಮಣ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಿರುವ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಂಡವಪುರ ಅಂಬಾವನ ಡಾ.ವಿದ್ಯಾಹಂಸ ಭಾರತಿ ಮಹರಾಜ್ ಸಾನ್ನಿಧ್ಯ ವಹಿಸುವರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ ಅಧ್ಯಕ್ಷತೆ ವಹಿಸುವರು. ಶ್ರೀರಂಗಪಟ್ಟಣದ ಶಾಶ್ವತಿ ಧಾರ್ಮಿಕ ಸೇವಾ ಸಮಿತಿಯ ಶ್ರೀ ಭಾನುಪ್ರಕಾಶ್ ಶರ್ಮ ಭಾಗವಹಿಸುವರು. ಇದೇ ಸಂದರ್ಭದಲ್ಲಿ ಕಿರುತೆರೆಯ ಖ್ಯಾತ ಗಾಯಕ ಶಶಿಧರ ಕೋಟೆ ಅವರ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಭಾನುಪ್ರಕಾಶ್ ಶರ್ಮ, ಕೆ.ರಘುರಾಂ, ಸಿ.ಆರ್.ನಾಗರಾಜು, ವಿ.ವಿ.ಶಾಸ್ತ್ರಿ ಉಪಸ್ಥಿತರಿದ್ದರು.

Translate »