ನಾಳೆ ರಾಷ್ಟ್ರೀಯ ಯುವ ಕಾಂಗ್ರೆಸ್  ಉಪಾಧ್ಯಕ್ಷ ಬಿ.ವಿ.ಶ್ರೀನಿವಾಸ್‍ಗೆ ಅಭಿನಂದನೆ
ಮೈಸೂರು

ನಾಳೆ ರಾಷ್ಟ್ರೀಯ ಯುವ ಕಾಂಗ್ರೆಸ್  ಉಪಾಧ್ಯಕ್ಷ ಬಿ.ವಿ.ಶ್ರೀನಿವಾಸ್‍ಗೆ ಅಭಿನಂದನೆ

July 23, 2018

ಮೈಸೂರು:  ರಾಷ್ಟ್ರೀಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವಿ.ಶ್ರೀನಿವಾಸ್ ಅವರಿಗೆ ಜು.24ರಂದು ಮೈಸೂರು ಗ್ರಾಮಾಂ ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಸಮಿತಿ ಉಪಾಧ್ಯಕ್ಷ ಆರ್.ಪ್ರಕಾಶ್‍ಕುಮಾರ್ ತಿಳಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11.30ಕ್ಕೆ ಪುರಭವನ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ರೈಲು ನಿಲ್ದಾಣ ವೃತ್ತದಲ್ಲಿರುವ ಡಾ.ಬಾಬು ಜಗಜೀವನರಾಂ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬೂ ಜಗಜೀವನರಾಂ ಭಾವಚಿತ್ರಗಳ ಮೆರವಣಿಗೆ ನಡೆಸಲಾಗುವುದು ಎಂದರು.

ರಾಷ್ಟ್ರೀಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವಿ.ಶ್ರೀನಿ ವಾಸ್, ಶಾಸಕರಾದ ತನ್ವೀರ್ ಸೇಠ್, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ನಂತರ ಕಾಂಗ್ರೆಸ್ ಕಚೇರಿಯಲ್ಲಿ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಬಿ.ವಿ.ಶ್ರೀನಿವಾಸ್ ಹಾಗೂ ಕಾಂಗ್ರೆಸ್ ಶಾಸಕರನ್ನು ಸನ್ಮಾನಿಸಲಾಗು ವುದು ಎಂದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಸವ ರಾಜನಾಯ್ಕ, ಕಾರ್ಯದರ್ಶಿ ಹುಣಸೂರು ಬಸವಣ್ಣ, ಕಾರ್ಯದರ್ಶಿ ಶಿವಪ್ರಸಾದ್, ಪ.ಜಾ.ಘಟಕದ ಉಪಾಧ್ಯಕ್ಷ ಕುಪ್ಪರವಳ್ಳಿ ಮುನಿಯಪ್ಪ, ಪ್ರಧಾನ ಕಾರ್ಯದರ್ಶಿ ಎ.ಆರ್.ಕಾಂತರಾಜ್ ಉಪಸ್ಥಿತರಿದ್ದರು.

Translate »