ಪಿರಿಯಾಪಟ್ಟಣ ಶಾಸಕ ಮಹದೇವ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಮೈಸೂರು

ಪಿರಿಯಾಪಟ್ಟಣ ಶಾಸಕ ಮಹದೇವ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

December 30, 2018

ಮೈಸೂರು:  ಪಿರಿಯಾ ಪಟ್ಟಣ ಮಾಜಿ ಶಾಸಕ ಕೆ.ವೆಂಕಟೇಶ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ರುವ ಶಾಸಕ ಕೆ.ಮಹದೇವು ಅವರನ್ನು ಬಂಧಿ ಸುವಂತೆ ಒತ್ತಾಯಿಸಿ ಮೈಸೂರು ಗ್ರಾಮಾಂ ತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರಿನ ನ್ಯಾಯಾಲಯದ ಮುಂಭಾಗ ವಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿ ಭಟನೆ ಆರಂಭಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಇತ್ತೀಚೆಗೆ ಶಾಸಕ ಕೆ.ಮಹದೇವು ಅಧಿಕಾರಿಯೊಬ್ಬರೊಂದಿಗೆ ದೂರವಾಣಿಯಲ್ಲಿ ಮಾತನಾಡುವಾಗ ಮಾಜಿ ಶಾಸಕ ವೆಂಕಟೇಶ್ ಹಾಗೂ ಕಾಂಗ್ರೆಸ್ ನವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಈ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ತಾಲೂಕಿನಲ್ಲಿ ರಾಜಕೀಯ ಸಂಘರ್ಷಕ್ಕೆ ಕಾರಣರಾಗುತ್ತಿದ್ದಾರೆ. ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಮಹದೇವು ಅವರ ವಿರುದ್ಧ ಪಿರಿಯಾಪಟ್ಟಣ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕೂಡಲೇ ಬಂಧಿಸ ಬೇಕು. ಇನ್ನೆರಡು ದಿನಗಳಲ್ಲಿ ಅವರನ್ನು ಬಂಧಿಸದಿದ್ದರೆ ಜಿಲ್ಲಾ ಪೆÇಲೀಸ್ ವರಿಷ್ಠಾ ಧಿಕಾರಿ ಕಚೇರಿ ಬಳಿ ಧರಣಿ ನಡೆಸಲಾಗು ವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮೈಸೂರು ಜಿಲ್ಲಾ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಮೋಸಿನ್ ಖಾನ್, ನಗರಾಧ್ಯಕ್ಷ ರಾಜ ರಾಜೇಂದ್ರ, ಉಪಾಧ್ಯಕ್ಷ ರಾಘವೇಂದ್ರ, ಪಿರಿಯಾಪಟ್ಟಣ ಕ್ಷೇತ್ರದ ಅಧ್ಯಕ್ಷ ಕೃಷ್ಣೇಗೌಡ, ಪ್ರಧಾನ ಕಾರ್ಯದರ್ಶಿ ಧನಗಳ್ಳಿ ಪ್ರವೀಣ್, ಹಿನಕಲ್ ಮಂಜು, ಮನೋಜ್, ಸಂಪತ್ ಕುಮಾರ್, ಗಿರೀಶ್, ಹೇಮಂತ್, ರೋಹಿತ್, ಹರೀಶ್, ಅಜರ್, ಜಾವಿದ್ ಪಾಷಾ, ವಿನಯ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Translate »